ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್‌ ಕಾರ್ಡ್‌ – ಸರ್ಕಾರದ ಮಾರ್ಗಸೂಚಿಯಲ್ಲಿ ಏನಿದೆ?

Public TV
1 Min Read

ಬೆಂಗಳೂರು: ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ (Free Bus Travel) ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ರಾಜ್ಯದೊಳಗಿನ ಪುಯಾಣಕ್ಕೆ ಮಾತ್ರ ಈ ಯೋಜನೆಯು ಅನ್ವಯಿಸುತ್ತದೆ. ಮಹಿಳೆಯರು ಸೇವಾ ಸಿಂಧು (Seva Sindhu) ಮೂಲಕ ಅರ್ಜಿಗಳನ್ನು ಪಡೆಯಬೇಕಾಗುತ್ತದೆ. ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಜೂನ್‌ 11 ರಿಂದ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ನಡೆಸಬಹುದು.

 


ಮಾರ್ಗಸೂಚಿಯಲ್ಲಿ ಏನಿದೆ?
ಐಷಾರಾಮಿ (Luxury) ಬಸ್‌ಗಳಾದ ರಾಜಹಂಸ, ನಾನ್-ಎ.ಸಿ.ಸ್ಲೀಪರ್‌, ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್‌ಗಳಲ್ಲಿ (ಅಂತರರಾಜ್ಯ, ಎ.ಸಿ. ಮತ್ತು ಐಷಾರಾಮಿ (Luxury) ಬಸ್‌ಗಳನ್ನು ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.  ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

ಈ ಯೋಜನೆಯಡಿ ನಾಲ್ಕು, ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುವುದು.

ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು ಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ.

ಶಕ್ತಿ, ಸ್ಮಾರ್ಟ್ ಕಾರ್ಡ್ ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ.

Share This Article