51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ

Public TV
1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ (Guest Lecture) ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 40,000 ಹಾಗೂ ಸರ್ಕಾರಿ ಪ್ರೌಢಶಾಲೆಗಳಿಗೆ 11,000 ಶಿಕ್ಷಕರ ನೇಮಕ ಮಾಡಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ. ಇದನ್ನೂ ಓದಿ: ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್

2025-26ನೇ ಸಾಲಿನಲ್ಲಿ ಪೂರ್ವ ನಿಗದಿಯಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿ ನಿರ್ವಹಣೆ ಮಾಡಬೇಕಾಗಿದೆ. ಶಾಲಾ ಪ್ರಾರಂಭದ ದಿನವೇ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ಅಂತ್ಯದ ವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಣಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ನೇಮಕಾತಿ ಮಾಡಿಕೊಳ್ಳುವ ಒಟ್ಟು 51 ಸಾವಿರ ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಅವಶ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಶಿಕ್ಷಕರ ಜಿಲ್ಲಾ, ತಾಲೂಕುವಾರು ವಿವರಗಳೊಂದಿಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಹೌದು ನಾವು ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ ಕೊಟ್ಟಿದ್ದೇವೆ, ತಪ್ಪೇನಿದೆ?: ಡಿಕೆಶಿ ಸಮರ್ಥನೆ

Share This Article