ಬೆಂಗಳೂರಿನಲ್ಲಿ ಇನ್ಮುಂದೆ ಮಧ್ಯರಾತ್ರಿ ವರೆಗೂ ಬಾರ್, ಹೋಟೆಲ್‌ಗಳು ಓಪನ್

Public TV
1 Min Read

– ಸಮಯದ ಅವಧಿ ವಿಸ್ತರಿಸಿ ಸರ್ಕಾರ ಆದೇಶ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇನ್ಮುಂದೆ ಮಧ್ಯರಾತ್ರಿ ವರೆಗೂ ಬಾರ್‌, ಹೋಟೆಲ್‌ಗಳ ಓಪನ್‌ಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಾರ್, ಹೋಟೆಲ್ ಮಾಲೀಕರ ಅನೇಕ ವರ್ಷಗಳ ಬೇಡಿಕೆಗೆ ಸರ್ಕಾರ ಕೊನೆಗೂ ಅಸ್ತು ಎಂದಿದೆ. ಹೊಟೇಲ್, ಬಾರ್ ತೆರೆಯುವ ಸಮಯದ ಅವಧಿ ವಿಸ್ತರಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮಿ ಸಾಗರ್ ಆದೇಶ ಹೊರಡಿಸಿದ್ದಾರೆ.

ಎಷ್ಟು ಗಂಟೆ ತೆರೆಯಲು ಅವಕಾಶ?
ಸಿಎಲ್ 4: ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆ
ಸಿಎಲ್ 6(ಎ): ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆ
ಸಿಎಲ್ 7: ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆ
ಸಿಎಲ್ 7ಡಿ – ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆ
ಸಿಎಲ್ 9 – ಬೆಳಗ್ಗೆ 10 ರಿಂದ ಮಧ್ಯರಾತ್ರಿ 1 ಗಂಟೆ

Share This Article