ಸರ್ಕಾರಿ ನೌಕರರ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ – ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

Public TV
1 Min Read

ಬೆಂಗಳೂರು: ಪ್ರತಿ ವರ್ಷ ಸರ್ಕಾರಿ ನೌಕರರು ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಹೆಚ್ಚಾಗುತ್ತಿವೆ. ಎಲ್ಲಾ ನೌಕರರೂ ಚರಾಸ್ತಿ-ಸ್ಥಿರಾಸ್ತಿಗಳನ್ನು ವೆಬ್‌ಸೈಟ್‌ನಲ್ಲಿ ಘೋಷಿಸಬೇಕು ಎಂದು ಲೋಕಾಯುಕ್ತ ಹೇಳಿತ್ತು. ಆದರೆ, ಇದಕ್ಕೆ ಸರ್ಕಾರಿ ನೌಕರರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹೊತ್ತಲ್ಲಿ ಸರ್ಕಾರ ಜಾಣನಡೆ ಅನುಸರಿಸಿದೆ.

ಪ್ರತಿಯೊಬ್ಬ ಸರ್ಕಾರಿ ನೌಕರರು ಸರ್ಕಾರಿ ಸೇವೆಗೆ ಸೇರುವಾಗ ಹಾಗೂ ಪ್ರತಿ ವರ್ಷ ನೌಕರರ ಹಾಗೂ ಕುಟುಂಬದ ಆಸ್ತಿ ವಿವರ ಸಲ್ಲಿಸೋದು ಈಗಾಗಲೇ ಕಡ್ಡಾಯವಾಗಿದೆ. ಅದರಂತೆ ಲೋಕಾಯಕ್ತದವರು ಯಾವ ಅಧಿಕಾರಿಗಳ ಬಗ್ಗೆ ಆಸ್ತಿ ವಿವರ ಕೇಳುತ್ತಾರೋ ವಿಳಂಬವಿಲ್ಲದೇ ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸೂಚನೆಗಳನ್ನು ಪಾಲಿಸದಿದ್ದರೆ ಇಲಾಖಾ ಮುಖ್ಯಸ್ಥರು ಹಾಗೂ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತೆ ಅಂತಾ ಸರ್ಕಾರ ಎಚ್ಚರಿಕೆ ನೀಡಿದೆ.

Share This Article