ಎಲ್‍ಕೆಜಿ-ಯುಕೆಜಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

Public TV
2 Min Read

ಬೆಂಗಳೂರು: ನವೆಂಬರ್‌ 8 ರಿಂದ ಎಲ್‍ಕೆಜಿ-ಯುಕೆಜಿ ಪ್ರಾರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಕೋವಿಡ್‌ ನಿಯಮಗಳನ್ನು ಪಾಲಿಸಿ ಆರಂಭಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಈ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅದರನ್ವಯ ಎಲ್‌ಕೆಜಿ-ಯುಕೆಜಿ ಆರಂಭಕ್ಕೆ ಆದೇಶ ಹೊರಡಿಸಿದೆ. ಇದನ್ನೂ ಓದಿ: ನ.8 ರಿಂದ ಅಂಗನವಾಡಿ ಕೇಂದ್ರಗಳು ರೀ ಓಪನ್

ಮಾರ್ಗಸೂಚಿಗಳ ವಿವರ ಹೀಗಿದೆ!
* ಅರ್ಧ ದಿನ ಮಾತ್ರ ತರಗತಿಗಳನ್ನು ನಡೆಸಬೇಕು.
* ಶೇ. 2 ಕ್ಕಿಂತ ಕಡಿಮೆ ಕೊರೊನಾ ಪ್ರಕರಣ ಇರುವ ತಾಲೂಕುಗಳಲ್ಲಿ ಮಾತ್ರ ಅವಕಾಶ.
* ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ತರಬೇಕು.
* ನಿತ್ಯ ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.
* ಎಲ್ಲಾ ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 50 ವರ್ಷ ಮೇಲ್ಪಟ್ಟವರು ಫೇಸ್ ಶೀಲ್ಡ್ ಧರಿಸಬೇಕು.
* ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.
* ಮನೆಯಿಂದಲೇ ಮಕ್ಕಳು ಉಪಹಾರ ಮತ್ತು ಕುಡಿಯುವ ನೀರು ತರಲು ಅವಕಾಶ ಕೊಡಬೇಕು.
* ಶಾಲೆಗಳಲ್ಲಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಇದನ್ನೂ ಓದಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪರಿಸರ ಸ್ನೇಹಿ ಅರಿವು ಮೂಡಿಸಿದ ಪಬ್ಲಿಕ್ ಹೀರೋ

VIDHAN SHOUDHA

* ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ಸಮಸ್ಯೆ ಇದ್ದರೆ, ವಿದ್ಯಾರ್ಥಿಗಳಿಗೆ ಶಾಲೆಗೆ ಬರಲು ಅವಕಾಶ ನೀಡಬಾರದು.
* ಶಾಲಾ ಆವರಣ, ಶಾಲೆಯ ಒಳಗೆ ವಿದ್ಯಾರ್ಥಿಗಳನ್ನು ಕೂರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮವಹಿಸಬೇಕು.
* ವಿದ್ಯಾರ್ಥಿಗೆ ಸೋಂಕು ಬಂದ ಕೂಡಲೇ ಶಾಲೆ ಮುಚ್ಚಿಸಿ ಎಲ್ಲಾ ವಿದ್ಯಾರ್ಥಿಗಳಿಗೂ ತಪಾಸಣೆ ನಡೆಸಬೇಕು.
* ವಿದ್ಯಾರ್ಥಿಯ ಆರೋಗ್ಯದ ಮೇಲೆ ನಿತ್ಯ ಶಾಲೆಯವರು ನಿಗಾ ವಹಿಸಬೇಕು.
* ಸಂದರ್ಶಕರು ಅಥವಾ ಮೂರನೇ ವ್ಯಕ್ತಿಗಳಿಗೆ ಶಾಲೆಗೆ ಪ್ರವೇಶ ನೀಡಬಾರದು.
* ಶಾಲೆ ಮುಚ್ಚಿಸಿದ ಬಳಿಕ ಸ್ಥಳೀಯ ಆರೋಗ್ಯ ಅಧಿಕಾರಿಗಳ ಸೂಚನೆಯಂತೆ ಶಾಲೆ ಸಂಪೂರ್ಣ ಸ್ಯಾನಿಟೈಸ್ ಮಾಡಿ ಮತ್ತೆ ಪ್ರಾರಂಭಿಸಬೇಕು.
* ಸೋಮವಾರದಿಂದ ಶುಕ್ರವಾರದೊಳಗೆ ಬೆಳಗ್ಗೆ 9.30 ರಿಂದ ಮಧ್ಯಾಹ್ನ 3.30 ವರೆಗೆ ತರಗತಿ ನಡೆಸಬೇಕು.

Share This Article
Leave a Comment

Leave a Reply

Your email address will not be published. Required fields are marked *