Modi cabinet: ಕರ್ನಾಟಕದ ನಾಲ್ವರು ಸಚಿವರಿಗೆ ಬಂಪರ್‌ – ಯಾರಿಗೆ ಯಾವ ಖಾತೆ?

Public TV
1 Min Read

– ಎನ್‌ಡಿಎ ಸರ್ಕಾರದ ಮೊದಲ ಕ್ಯಾಬಿನೆಟ್‌ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ನಾಲ್ವರು ಕೇಂದ್ರ ಸಚಿವರಿಗೆ ಖಾತೆ ಹಂಚಿಕೆಯಾಗಿದೆ.

3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರಿಂದು ತಮ್ಮ ನಿವಾಸದಲ್ಲಿ ಮೊದಲ ಸಂಪುಟ ಸಭೆ ನಡೆಸಿದರು. 30 ಸಂಪುಟ ದರ್ಜೆ ಸಚಿವರು, ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಸಂಪುಟ ಸಭೆಯ ಬಳಿಕ ಖಾತೆ ಹಂಚಿಕೆ ಮಾಡಲಾಗಿದ್ದು, ಪ್ರಮುಖ ಖಾತೆಗಳನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದೆ. ಯಾರಿಗೆ ಯಾವ ಖಾತೆ ಹಂಚಿಕೆಯಾಗಿದೆ ಎಂಬುದನ್ನಿಲ್ಲಿ ನೋಡೋಣ…

  • ಹೆಚ್‌.ಡಿ ಕುಮಾರಸ್ವಾಮಿ – ಉಕ್ಕು ಮತ್ತು ಬೃಹತ್‌ ಕೈಗಾರಿಕೆ
  • ಪ್ರಹ್ಲಾದ್‌ ಜೋಶಿ – ಆಹಾರ ಮತ್ತು ನಾಗರೀಕ ಸರಬರಾಜು ಖಾತೆ, ನವೀಕರಿಸಬಹುದಾದ ಇಂಧನ
  • ಶೋಭಾ ಕರಂದ್ಲಾಜೆ – ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ಮತ್ತು ಕಾರ್ಮಿಕ ಇಲಾಖೆ ರಾಜ್ಯಖಾತೆ
  • ವಿ. ಸೋಮಣ್ಣ – ಜಲಶಕ್ತಿ ರಾಜ್ಯಖಾತೆ, ರೈಲ್ವೇ ಸಚಿವ ರಾಜ್ಯಖಾತೆ

ಜೂನ್‌ 9ರಂದು ನರೇಂದ್ರ ಮೋದಿ ಸಂಪುಟದ ನೂತನ ಸಚಿವರಾಗಿ ಹೆಚ್‌.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದರು. ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರು 2ನೇ ಬಾರಿಗೆ ಮೋದಿ ಸಂಪುಟ ಸಚಿವರಾಗಿದ್ದಾರೆ. ಜೊತೆಗೆ ಮೊದಲಬಾರಿಗೆ ಸಂಸದರಾಗಿ ಆಯ್ಕೆಯಾದ ವಿ.ಸೋಮಣ್ಣ ಅವರು ಕೂಡ ಕೇಂದ್ರ ಸಚಿವರಾಗಿದ್ದಾರೆ.

ಇದರೊಂದಿಗೆ ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದರು. ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಯಿತು.

Share This Article