ಇನ್ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣ ದುಬಾರಿ – ಶುಲ್ಕ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

Public TV
1 Min Read

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ಬಿಲ್ ಹಾಗೂ ನೀರಿನ ಬಿಲ್ ಹೆಚ್ಚಳ ಮಾಡಿದ ಬಳಿಕ ಪದವಿ ಶಿಕ್ಷಣ ಶುಲ್ಕವನ್ನು 10% ಹೆಚ್ಚಳ (College Fees Hike) ಮಾಡಿ ಜನರಿಗೆ ಶಾಕ್ ನೀಡಿದೆ.

ವಿಶ್ವವಿದ್ಯಾಲಯಗಳು ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವನೆಗೆ ಉನ್ನತ ಶಿಕ್ಷಣ ಇಲಾಖೆ (Karnataka Higher Education Council) ಒಪ್ಪಿಗೆ ಕೊಟ್ಟಿದೆ. ಇದರಿಂದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜ್‍ಗಳ ಶಿಕ್ಷಣ ಶುಲ್ಕವನ್ನು 10% ಹೆಚ್ಚಿಸಲು ಸರ್ಕಾರದಿಂದ ಅನುಮತಿ ಸಿಕ್ಕಂತಾಗಿದೆ. ಪ್ರಸ್ತುತ ವರ್ಷದಿಂದಲೇ ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಇದನ್ನೂ ಓದಿ: ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ – ಮೆಡಿಕಲ್ ಅಂಗಡಿ ಹೊರತು ಪಡಿಸಿ ಎಲ್ಲಾ ವ್ಯಾಪಾರ ಬಂದ್

ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಏಕರೂಪ ಶುಲ್ಕ ತಜ್ಞರ ಸಮಿತಿ ನೀಡಿದ್ದ ವರದಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಯುವನಿಧಿಯಲ್ಲಿ ಕೊಡುತ್ತಿರುವ ಹಣ ಮತ್ತೊಂದು ರೀತಿಯಲ್ಲಿ ಸರ್ಕಾರ ವಾಪಸ್ ಪಡೆಯಲು ತೀರ್ಮಾನಿಸಿದಂತಿದೆ. ಇನ್ನು ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣವೂ ದುಬಾರಿಯಾಗಲಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಇದನ್ನೂ ಓದಿ: ಮಸ್ಕ್‌ನ ಸ್ಪೇಸ್‍ಎಕ್ಸ್ ರಾಕೆಟ್‍ನಲ್ಲಿ ಶೀಘ್ರ ಇಸ್ರೋ ಉಪಗ್ರಹ ಉಡಾವಣೆ

Share This Article