ಕುರ್ಚಿ ಕಿತ್ತಾಟ – ದೆಹಲಿಯಲ್ಲಿ ಶಾಗೆ ಮಾಹಿತಿ ಕೊಟ್ಟ ವಿಜಯೇಂದ್ರ

1 Min Read

ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ (Congress) ಕುರ್ಚಿ ಕಿತ್ತಾಟ ಜೋರಾಗಿ ನಡೆಯುತ್ತಿದ್ದಂತೆ ಇನ್ನೊಂದು ಕಡೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ (Amit shah) ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (B. Y. Vijayendra) ಭೇಟಿಯಾಗಿ ರಾಜ್ಯ ರಾಜಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ

ಬಿಹಾರ ಚುನಾವಣೆ (Bihar Election) ಎನ್‌ಡಿಎ ಮಿತ್ರ ಕೂಟ ಜಯಭೇರಿ ಭಾರಿಸಿದ್ದಕ್ಕೆ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಅಭಿನಂದಿಸಿದ್ದೇನೆ ಎಂದು ವಿಜಯೇಂದ್ರ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ:  ಸಿಎಂ-ಡಿಸಿಎಂ ʻಪವರ್‌ʼ ಫೈಟ್‌ ನಡುವೆ ಸೋಮವಾರ ಶಿಡ್ಲಘಟ್ಟಕ್ಕೆ ಸಿಎಂ ಟೂರ್‌

ಪೋಸ್ಟ್‌ನಲ್ಲಿ ಏನಿದೆ?
ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ.

ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು. ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದು ಬರೆದುಕೊಂಡಿದ್ದಾರೆ.

Share This Article