ಅಣ್ಣಂದಿರ ಆಸೆ ಈಡೇರಿಸಿದ ಸಹೋದರ

Public TV
1 Min Read

ಕೊಪ್ಪಳ: ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಕರ್ನಾಟಕ ಆಡಳಿತ ಸೇವೆ ಪರೀಕ್ಷೆ ಪಾಸಾಗಿ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗುವ ಮೂಲಕ ಸಹೋದರನೊಬ್ಬ ತಮ್ಮ ಅಣ್ಣಂದಿರ ಆಸೆಯನ್ನು ಈಡೇರಿಸಿದ್ದಾರೆ.

ಜಿಲ್ಲೆಯ ಕನಕಗಿರಿ ತಾಲೂಕಿನ ಕನಕಾಪುರ ಗ್ರಾಮದ ಯುವಕ ಶೇಖರಪ್ಪ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿದ್ದಾರೆ. ಕೃಷಿಕ ಕುಟುಂಬದ ಶೇಖರಪ್ಪ ಪಂಪನಗೌಡ ಮಾಲಿಪಾಟೀಲ್ ಎಂಜಿನಿಯರಿಂಗ್ ಪದವೀದರನಾಗಿದ್ದು, ಎಂ.ಟೆಕ್ ಪರೀಕ್ಷೆ ಬರೆಯುವ ವೇಳೆ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ಬರೆದಿದ್ದರು. ಅದರಲ್ಲಿ 1,031.25 ಅಂಕ ಪಡೆದು ಪ್ರಥಮ ದರ್ಜೆ ಅಧಿಕಾರಿಯಾಗಿ ಆಯ್ಕೆಯಾಗಿದ್ಧಾರೆ. ಇದನ್ನೂ ಓದಿ: ರವಿ ಚನ್ನಣ್ಣನವರ್ ಸ್ಫೂರ್ತಿಯಿಂದ ಡಿವೈಎಸ್ಪಿಯಾಗಿ ಆಯ್ಕೆಯಾಗಿದ್ದೇನೆ – ಎಂ.ಸುರೇಶ

ಕನಕಾಪುರ ಹಾಗೂ ಸಿದ್ದಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮುಗಿಸಿರುವ ಅವರು ಧಾರವಾಡದಲ್ಲಿ ಉನ್ನತ ವ್ಯಾಸಂಗ ಮಾಡಿದ್ದಾರೆ. ಬೆಂಗಳೂರಿನಲ್ಲಿ ಅರಣ್ಯಾಧಿಕಾರಿಯಾಗಿರುವ ಸಹೋದರ ಹನುಮಂತಪ್ಪ ಪಾಟೀಲ್ ಮತ್ತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಕರೇಗೌಡ ಪಾಟೀಲ್ ಸಹಕಾರದಿಂದ ಈ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಕೆಎಎಸ್ ಪರೀಕ್ಷೆಯಲ್ಲಿ ಪಾಸ್ – ಕೂಲಿ ಮಾಡಿ ಓದಿಸಿದ್ದ ತಾಯಿಗೆ ಮಗನ ಗಿಫ್ಟ್

ತಂದೆ ವಿಧಿವಶರಾಗಿದ್ದು, ತಾಯಿ ಶರಣಮ್ಮನವರ ಆಶ್ರಯದಲ್ಲಿ ಸತತ ಅಧ್ಯಯನ, ಪರಿಶ್ರಮದ ಮೂಲಕ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ತರಬೇತಿ ಪಡೆದಿದ್ದಾರೆ. ಅದನ್ನು ಬಿಟ್ಟರೆ ಮನೆಯಲ್ಲಿಯೇ ಅಭ್ಯಾಸ ಮಾಡಿರುವುದು ವಿಶೇಷವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *