ಬೆಂಗಳೂರು: ರಾಜ್ಯದಲ್ಲಿ ಮಳೆಯ (Rain) ಆರ್ಭಟ ಮುಂದುವರಿದಿದ್ದು, ಇಂದು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (orange alert) ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯು ಕೊಡಗು (Kodagu), ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: Rain Alert | ಕೊಡಗಿನಲ್ಲಿ ಆರೆಂಜ್ ಅಲರ್ಟ್ – ಇಂದು ಶಾಲಾ, ಕಾಲೇಜುಗಳಿಗೆ ರಜೆ
ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಕೊಡಗಿನಲ್ಲಿಂದು ಶಾಲಾ, ಕಾಲೇಜುಗಳಿಗೆ ರಜೆ
ಕೊಡಗಿನಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕಾಜಿರಂಗ ಹುಲ್ಲುಗಾವಲು ಪಕ್ಷಿ ಗಣತಿ – ಮೋದಿ ಉಲ್ಲೇಖಿಸಿದ ಸಮೀಕ್ಷೆಯ ವಿಶೇಷತೆ ಏನು?
ವಿಜಯಪುರದಲ್ಲೂ ಭಾರೀ ಮಳೆ:
ಅತ್ತ ವಿಜಯಪುರ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಕಳೆದ ರಾತ್ರಿಯಿಂದ ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುಡುಗು, ಸಿಡಿಲು ಸಮೇತ ಭಾರಿ ಮಳೆ ಆಗುತ್ತಿದೆ. ಮಳೆಗೆ ನಗರ ಜೀವನ ಅಸ್ಥವ್ಯಸ್ಥವಾಗಿದೆ. ನಗರದ ಬಡಿ ಕಮಾನ ಬಳಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಮಳೆ ನೀರಿಗೆ ರಸ್ತೆಗಳು ಮುಚ್ಚಿ ಹೋಗಿವೆ. ಬೈಕ್ ಸವಾರರು, ಆಟೋ ಸೇರಿದಂತೆ ವಾಹನ ಸವಾರರು ಓಡಾಡಲು ಹರಸಾಹಸ ಪಡುತ್ತಿದ್ದಾರೆ.