SSLC ಫಲಿತಾಂಶ ಪ್ರಕಟ – 145 ವಿದ್ಯಾರ್ಥಿಗಳಿಗೆ ಔಟ್‌ ಆಫ್‌ ಔಟ್‌

By
2 Min Read

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ.  10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ.

ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ. ಸರ್ಕಾರಿ ಶಾಲೆಯ 21, ಅನುದಾನಿತ ಶಾಲೆಯ 8, ಖಾಸಗಿ ಶಾಲೆಯ 116 ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.

ಶಿಕ್ಷಣ ಸಚಿವ ನಾಗೇಶ್‌ ಅವರು ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ಇದನ್ನೂ ಓದಿ: ಮಳೆ ಅವಾಂತರದಿಂದ ಬೆಂಗಳೂರು ಬ್ರ್ಯಾಂಡ್ ಉಳಿಸಿಕೊಳ್ಳಲು ಸಿಎಂಗೆ ಪತ್ರ ಬರೆದ ಎಸ್ಎಂ ಕೃಷ್ಣ

ಎಂದಿನಂತೆ ಗ್ರಾಮೀಣ ವಿದ್ಯಾರ್ಥಿಗಳೇ ಉತ್ತಮ ಸಾಧನೆ ಮಾಡಿದ್ದಾರೆ. ನಗರ ಭಾಗದಲ್ಲಿ ಶೇ.86.64 ಫಲಿತಾಂಶ ದಾಖಲಾದರೆ ಗ್ರಾಮೀಣ ಭಾಗದಲ್ಲಿ ಶೇ.91.32 ರಷ್ಟು ಫಲಿತಾಂಶ ಪ್ರಕಟವಾಗಿದೆ.

20 ಶಾಲೆಗಳು ಶೂನ್ಯ ಸಂಪಾದನೆ ಮಾಡಿದರೆ 3,920 ಶಾಲೆಗಳು ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ.

ರ‍್ಯಾಂಕ್‌ ಪದ್ದತಿ ಕೈ ಬಿಟ್ಟ ಇಲಾಖೆ ಈ ಬಾರಿ ಗ್ರೇಡ್ ವ್ಯವಸ್ಥೆಯಲ್ಲಿ ಫಲಿತಾಂಶ ಘೋಷಣೆ ಮಾಡಿದೆ. ಬೆಂಗಳೂರು ದಕ್ಷಿಣ ಮತ್ತು ಯಾದಗಿರಿ ಜಿಲ್ಲೆಗೆ ಬಿ ಗ್ರೇಡ್ ಸಿಕ್ಕಿದರೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಎ ಗ್ರೇಡ್ ಸಿಕ್ಕಿದೆ.

ಯಾವ ಗ್ರೇಡ್‌ನಲ್ಲಿ ಎಷ್ಟು ಮಂದಿ ಪಾಸ್‌?
A+ – 1,18,875
– 1,82,600
B+ – 1,73,528
 – 1,43,900
C+  –  87,801
C   – 14,627

ಜೂನ್ 27 ರಿಂದ ಜುಲೈ 4 ವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ ಪಡೆಯಲು ಮೇ 30ರವರೆಗೆ ಅವಕಾಶ ನೀಡಲಾಗಿದೆ. ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು  ಜೂನ್ 6 ಕೊನೆಯ ದಿನಾಂಕವಾಗಿದೆ.

ಫಲಿತಾಂಶ ವೀಕ್ಷಣೆ ಹೇಗೆ?
ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ

ಮಾರ್ಚ್ 28 ರಿಂದ ಏಪ್ರಿಲ್ 11ರ ವರಗೆ 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *