SSLC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ.31.02 ವಿದ್ಯಾರ್ಥಿಗಳು ಪಾಸ್‌

Public TV
0 Min Read

ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಫಲಿತಾಂಶ ಇಂದು ಪ್ರಕಟವಾಗಿದ್ದು, 31.02% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶವನ್ನು ಪ್ರಕಟಿಸಿತು. ಪರೀಕ್ಷೆ-2 ರಲ್ಲಿ 69,275 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಜೂನ್ 14 ರಿಂದ 22ರ ವರೆಗೆ ಪರೀಕ್ಷೆ ನಡೆದಿತ್ತು. 2,23,293 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಒಟ್ಟು 69,275 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಅವರ ಪೈಕಿ ಬಾಲಕರು 38,820 ಹಾಗೂ ಬಾಲಕಿಯರು 30,455 ಉತ್ತೀರ್ಣರಾಗಿದ್ದಾರೆ.

ಫಲಿತಾಂಶವನ್ನು ಮಂಡಳಿಯ ವೆಬ್‌ಸೈಟ್‌ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ.

Share This Article