ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ

Public TV
0 Min Read

ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್‌ನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam) ಫಲಿತಾಂಶ ಶುಕ್ರವಾರ ಪ್ರಕಟಗೊಳ್ಳಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 10.30 ಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ (SSLC Result) ಪ್ರಕಟ ಮಾಡಲಿದ್ದಾರೆ.

ಶಿಕ್ಷಣ ಇಲಾಖೆ ಅಧಿಕಾರಿಗಳ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ www.karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆಗಳು ನಡೆದಿತ್ತು. ಸುಮಾರು 8.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

Share This Article