ರಾಜ್ಯದಲ್ಲಿ 5,031 ಪಾಸಿಟಿವ್ – ಬೆಂಗಳೂರಿನಲ್ಲಿ 4,324 ಮಂದಿಗೆ ಸೋಂಕು

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ರಾಜ್ಯದಲ್ಲಿ 5,031 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ. ಅದರಲ್ಲಿಯೂ ಬೆಂಗಳೂರಿನಲ್ಲಿ 4,324 ಮಂದಿಗೆ ಸೋಂಕು ಬಂದಿದ್ದು, ಪಾಸಿಟಿವಿಟಿ ರೇಟ್ ಶೇ.7.5ಕ್ಕೆ ಏರಿದೆ.

ರಾಜ್ಯದಲ್ಲಿ ಇಂದು 371 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು ರಾಜ್ಯದಲ್ಲಿ 29,62,043 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಶಬರಿಮಲೆ ಪ್ರವೇಶಿಸಿದ್ದ ಬಿಂದು ಮೇಲೆ ನಡು ರಸ್ತೆಯಲ್ಲಿ ದಾಳಿ – ಆರೋಪಿ ಅರೆಸ್ಟ್

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.3.95ಕ್ಕೆ ಏರಿಕೆಯಾಗಿದ್ದು, ಮರಣ ಪ್ರಮಾಣ ಶೇ.0.01 ಇದೆ. ರಾಜ್ಯದಲ್ಲಿ ಇಂದು ಒಂದೇ ಒಂದು ಓಮಿಕ್ರಾನ್ ಕೇಸ್ ಪತ್ತೆಯಾಗಿಲ್ಲ.

ರಾಜ್ಯದಲ್ಲಿ ಇಂದು ಒಟ್ಟು 3,41,651 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,27,194 ಸ್ಯಾಂಪಲ್ (ಆರ್‌ಟಿ-ಪಿಸಿಆರ್ 1,24,382 + 2,812 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮೋದಿ ಮೇಲೆ ಅಲ್ಲ ಇದು ಪ್ರತಿಯೊಬ್ಬ ಭಾರತೀಯನ ಮೇಲೆ ನಡೆದ ದಾಳಿ: ಕಂಗನಾ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 21, ಬೆಳಗಾವಿ 64, ಬೆಂಗಳೂರು ಗ್ರಾಮಾಂತರ 25, ಬೆಂಗಳೂರು ನಗರ 4,324, ಬೀದರ್ 3, ಚಾಮರಾಜನಗರ 2, ಚಿಕ್ಕಬಳ್ಳಾಪುರ 20, ಚಿಕ್ಕಮಗಳೂರು 09, ಚಿತ್ರದುರ್ಗ 4, ದಕ್ಷಿಣ ಕನ್ನಡ 106, ದಾವಣಗೆರೆ 3, ಧಾರವಾಡ 48, ಗದಗ 11, ಹಾಸನ 47, ಹಾವೇರಿ 0, ಕಲಬುರಗಿ 25, ಕೊಡಗು 19, ಕೋಲಾರ 14, ಕೊಪ್ಪಳ 0, ಮಂಡ್ಯ 66, ಮೈಸೂರು 65, ರಾಯಚೂರು 0, ರಾಮನಗರ 3, ಶಿವಮೊಗ್ಗ 16, ತುಮಕೂರು 20, ಉಡುಪಿ 92, ಉತ್ತರ ಕನ್ನಡ 13, ವಿಜಯಪುರ 11 ಮತ್ತು ಯಾದಗಿರಿಯಲ್ಲಿ 0 ಪಾಸಿಟಿವ್ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *