ರಾಜ್ಯದ ಹವಾಮಾನ ವರದಿ – 14-11-2024

Public TV
1 Min Read

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ತುಂತುರು ಮಳೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆಯಾಗಿದ್ದು, ದಕ್ಷಿಣ ಒಳನಾಡು, ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 26-20
ಮಂಗಳೂರು: 31-25
ಶಿವಮೊಗ್ಗ: 29-22
ಬೆಳಗಾವಿ: 29-21
ಮೈಸೂರು: 28-21

ಮಂಡ್ಯ: 28-21
ಮಡಿಕೇರಿ: 24-17
ರಾಮನಗರ: 27-21
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-20

ಕೋಲಾರ: 26-21
ತುಮಕೂರು: 27-21
ಉಡುಪಿ: 32-24
ಕಾರವಾರ: 33-26
ಚಿಕ್ಕಮಗಳೂರು: 26-19
ದಾವಣಗೆರೆ: 29-22

ಹುಬ್ಬಳ್ಳಿ: 30-21
ಚಿತ್ರದುರ್ಗ: 28-21
ಹಾವೇರಿ: 30-22
ಬಳ್ಳಾರಿ: 29-22
ಗದಗ: 30-21
ಕೊಪ್ಪಳ: 29-22

ರಾಯಚೂರು: 31-23
ಯಾದಗಿರಿ: 32-23
ವಿಜಯಪುರ: 32-22
ಬೀದರ್: 31-20
ಕಲಬುರಗಿ: 32-22
ಬಾಗಲಕೋಟೆ: 31-22

Share This Article