ಈ ಹಿಂದೆ ಪಠ್ಯಪುಸ್ತಕಗಳಲ್ಲಿ ಟಿಪ್ಪು ವೈಭವೀಕರಣ ಇತ್ತು ಈಗ ಇಲ್ಲ: ಬಿ.ಸಿ ನಾಗೇಶ್

Public TV
1 Min Read

ಮಡಿಕೇರಿ: ಈ ಹಿಂದೆ ಪಠ್ಯಪುಸ್ತಕದಲ್ಲಿ (Textbooks) ನಮ್ಮನ್ನಾಳಿದ ರಾಜರ ಸರಿಯಾದ ಇತಿಹಾಸ ಇರಲಿಲ್ಲ. ಮೆಕಾಲೆ ಶಿಕ್ಷಣ ಪದ್ಧತಿ ಇತ್ತು. ಟಿಪ್ಪುವಿನಂತಹ (Tipu Sultan) ದೊರೆಗಳ ವೈಭವೀಕರಣ ಇತ್ತು. ಕೆಂಪೇಗೌಡರು (Kempe Gowda), ಮೈಸೂರು (Mysuru) ರಾಜರ ಇತಿಹಾಸ ತೆಗೆಯಲಾಗಿತ್ತು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (B.C Nagesh) ಬೇಸರ ವ್ಯಕ್ತಪಡಿಸಿದರು.

tippu

ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ಈ ನಾಡನ್ನು ಬ್ರಿಟಿಷರಿಗೂ ಮುನ್ನ ನಮ್ಮ ರಾಜರು ವೈಜ್ಞಾನಿಕವಾಗಿ ಆಳ್ವಿಕೆ ಮಾಡಿದ್ದರು. ಉತ್ತಮ ನಗರಗಳನ್ನು, ಕೆರೆಕಟ್ಟೆಗಳನ್ನು ಕಟ್ಟಿದ್ದರು. ಪ್ರಕೃತಿಗೆ ಪೂರಕವಾಗಿ ಕಾರ್ಯನಿರ್ವಹಿಸಿದ್ದರು ಎಂಬುದನ್ನು ತಿಳಿಸುವುದೇ ನಾಡಪ್ರಭು ಕೆಂಪೇಗೌಡ ಅವರ ರಥಯಾತ್ರೆಯ ಉದ್ದೇಶ ಎಂದರು. ಕೆಂಪೇಗೌಡರು ಎಲ್ಲರಿಗೂ ಜನಹಿತ, ಜನಪರವಾದ ಆಡಳಿತ ನೀಡಿದ್ದರು. ಇಂದಿನ ರಾಜಕಾರಣಿಗಳು, ಅಧಿಕಾರಿಗಳಿಗೆ ಮೇಲ್ಪಂಕ್ತಿಯಾಗಿದ್ದರು ಎಂದರು. ಇದನ್ನೂ ಓದಿ: ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು: ಬಿ.ಸಿ ನಾಗೇಶ್

ನವೆಂಬರ್ 11 ರಂದು ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಉದ್ಘಾಟಿಸಲಿದ್ದಾರೆ. ಅದರ ನಿರ್ಮಾಣಕ್ಕೆ ರಾಜ್ಯದ ಎಲ್ಲ ಭಾಗಗಳಿಂದ ಪವಿತ್ರ ಮಣ್ಣನ್ನು ತರಲಾಗುತ್ತಿದೆ. ಕನಿಷ್ಠ ಪಕ್ಷ ಆ ಪ್ರತಿಮೆ ನೋಡಿಯಾದರೂ ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ ಜನಪರ ಆಡಳಿತ ನೀಡುವ ಮಾನಸಿಕತೆ ಬರಲಿ ಎಂಬುದು ಇದರ ಉದ್ದೇಶ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಭರ್ಜರಿ ಪೋಸ್ ಸೆರೆಹಿಡಿದ ಸಿಎಂ ಬೊಮ್ಮಾಯಿ!

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *