ಮಜಾವಾದಿ ಸಿದ್ದರಾಮಯ್ಯ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು – ಜೆಡಿಎಸ್

Public TV
1 Min Read

– ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಸರ್ಕಾರ

ಬೆಂಗಳೂರು: ಗ್ಯಾರಂಟಿಗೆ SCSP-TSP ಹಣ ಬಳಕೆ ಮಾಡ್ತಿರೋ ಸರ್ಕಾರದ ವಿರುದ್ದ ಜೆಡಿಎಸ್ (JDS) ಕಿಡಿಕಾರಿದೆ. ಎಕ್ಸ್‌ನಲ್ಲಿ ಈ ಬಗ್ಗೆ ಆಕ್ರೋಶ ಹೊರ ಹಾಕಿರುವ ಜೆಡಿಎಸ್, ಕಾಂಗ್ರೆಸ್ (Congress) ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪ ಮಾಡಿದೆ.

ಪೋಸ್ಟ್‌ನಲ್ಲಿ ಏನಿದೆ?
ದಲಿತರನ್ನು ಕೇವಲ ಮತಬ್ಯಾಂಕ್‌ ಆಗಿ ಬಳಸಿಕೊಳ್ಳುತ್ತಲೇ ಬಂದಿರುವ ಕಾಂಗ್ರೆಸ್ ಮತ್ತೆ ದಲಿತರ ಬೆನ್ನಿಗೆ ಚೂರಿ ಹಾಕಿದೆ. ಮಜಾವಾದಿ ಸಿದ್ದರಾಮಯ್ಯ (CM Siddaramaiah) ಅಹಿಂದ ಸಮುದಾಯಕ್ಕೆ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು. ಇದನ್ನೂ ಓದಿ: ಕಾನೂನು, ಕಾಯ್ದೆ ಪ್ರಕಾರವೇ ಗ್ಯಾರಂಟಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ಬಳಕೆ: ಮಹದೇವಪ್ಪ

ದಲಿತ ವಿರೋಧಿ ಸಿದ್ದರಾಮಯ್ಯ 2025-26ನೇ ಸಾಲಿನಲ್ಲಿ SCSP/TSP ಕಾರ್ಯಕ್ರಮಗಳಿಗೆ ಮೀಸಲಿಟ್ಟಿದ್ದ 42,017.51 ಕೋಟಿ ರೂ.ನಲ್ಲಿ 11,896.84 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗೆ ಹಂಚಿಕೆ ಮಾಡಿಕೊಳ್ಳುತ್ತಿದೆ. ಪರಿಶಿಷ್ಟರ SCSP/TSP ಹಣಕ್ಕೆ ಕನ್ನ ಹಾಕಿದ ಸಿದ್ದರಾಮಯ್ಯ. 2025-26ನೇ ಸಾಲಿನಲ್ಲಿ 11,896.84 ಕೋಟಿ ರೂ. 2024-25ನೇ ಸಾಲಿನಲ್ಲಿ 14.282.38 ಕೋಟಿ ರೂ. 2023-24ನೇ ಸಾಲಿನಲ್ಲಿ 11,114 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ಸಾವಿರಾರು ಕೋಟಿ ರೂ. ಹಣವನ್ನ ಅವೈಜ್ಞಾನಿಕ ಗ್ಯಾರಂಟಿಗಳಿಗೆ (Guarantee Schemes) ದುರುಪಯೋಗ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ಮತ್ತೊಮ್ಮೆ ದಲಿತರಿಗೆ ದ್ರೋಹ ಮಾಡುತ್ತಿದೆ ಎಂದು ಕಿಡಿಕಾರಿದೆ. ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಅನ್ನೋದು ಬಿಜೆಪಿ ಸೃಷ್ಟಿ: ಬೋಸರಾಜು

Share This Article