ಅಪಘಾತದಲ್ಲಿ ಮೃತಪಟ್ಟ KSRTC ಚಾಲನಾ ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ಪರಿಹಾರ ಚೆಕ್ ವಿತರಣೆ

Public TV
2 Min Read

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಕೆಎಸ್‌ಆರ್‌ಟಿಸಿ (KSRTC) ಚಾಲನಾ ಸಿಬ್ಬಂದಿಯ ಕುಟುಂಬಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) 1 ಕೋಟಿ ಅಪಘಾತ ಪರಿಹಾರದ ಚೆಕ್‌ ವಿತರಣೆ ಮಾಡಿದರು.

ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಚಾಲಕರಾದ ನಾಗರಾಜು, ಚಲಪತಿ ಮೃತಪಟ್ಟಿದ್ದರು. ಇಂದು ಎರಡು ಕುಟುಂಬದ ಅವಲಂಬಿತರಿಗೆ ತಲಾ 1 ಕೋಟಿ ರೂ. ಅಪಘಾತ ಪರಿಹಾರ ಚೆಕ್ ವಿತರಣೆಯನ್ನು ಕೆಎಸ್‌ಆರ್‌ಟಿಸಿ ನಿಗಮದ ಕೇಂದ್ರ ಕಚೇರಿಯಲ್ಲಿ ಮಾಡಲಾಯಿತು.

ಈ ವೇಳೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಮೃತಪಟ್ಟ ಚಾಲನಾ ಸಿಬ್ಬಂದಿಯನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಅವರ ಕುಟುಂಬಗಳ ಸುಭದ್ರತೆಗಾಗಿ ನಿಗಮವು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮಾ (Insurance) ಯೋಜನೆಯು ಬಹಳ ಉತ್ತಮವಾಗಿದ್ದು, ಈ ಯೋಜನೆಯನ್ನು ಸದ್ಯದಲ್ಲಿಯೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಕೂಡಲೇ ಕ್ರಮ ಜರುಗಿಸಲು ಸೂಚಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರೂಪಾಯಿ, ದಿರ್ಹಾಮ್‌ ವ್ಯವಹಾರಕ್ಕೆ ಭಾರತ, ಯುಎಇ ಒಪ್ಪಿಗೆ

ಕೆಎಸ್‌ಆರ್‌ಟಿಸಿ ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ಸಿಬ್ಬಂದಿಗಳಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮೆಯನ್ನು (On duty & Off Duty)  ಜಾರಿಗೊಳಿಸಿದೆ. ಈ ಯೋಜನೆಯಲ್ಲಿ, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ವತಿಯಿಂದ ಪ್ರೀಮಿಯಂ ರಹಿತ 50 ಲಕ್ಷ ರೂ. ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ರವರಿಂದ ವಾರ್ಷಿಕ 885 ರೂ. ಪ್ರೀಮಿಯಂ (ನೌಕರರಿಂದ) ಪಾವತಿಯ ಮೇರೆಗೆ 50 ಲಕ್ಷ ರೂ. ವಿಮೆಯು ಒಳಗೊಂಡಿರುತ್ತದೆ.

ಈ ಕಾರ್ಯಕ್ರಮದಲ್ಲಿ  ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಮಾತನಾಡಿ , ಮಾನ್ಯ ಸಾರಿಗೆ ಸಚಿವರು ಆದೇಶಿಸಿರುವಂತೆ ಕೂಡಲೇ ಅನುಕಂಪ ಆಧಾರದ ಮೇಲೆ ಕೆಲಸಕ್ಕೆ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

 

ಈ ಯೋಜನೆಯಡಿಯಲ್ಲಿ ಸಿಬ್ಬಂದಿಗಳು ಕರ್ತವ್ಯದ ಮೇಲಿದ್ದಾಗ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಂದರ್ಭಗಳಲ್ಲಿಯೂ ಉಂಟಾಗುವ ಅಪಘಾತಗಳಿಗೂ ಸಹ ಈ ವಿಮಾ ಸೌಲಭ್ಯ ಅನ್ವಯಿಸುತ್ತದೆ. ಕುಟುಂಬದವರು ಹಣವನ್ನು‌ ಬ್ಯಾಂಕಿನಲ್ಲಿ ಸ್ಥಿರ ಠೇವಣಿಯನ್ನು ಇಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಕಾಪಾಡಿಕೊಳ್ಳಬೇಕು.

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್