Bengaluru Bandh – ಇಂದು ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಮರ

By
2 Min Read

– ವಿವಿಧ ಬೇಡಿಕೆಗಳ ಈಡೇರಿಕೆಗೆ ಖಾಸಗಿ ಪಟ್ಟು

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ (Private Transport Association) ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್‌ ಬಿಸಿ ಶುರುವಾಗಿದೆ.

ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯುತ್ತಿಲ್ಲ. ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಒಕ್ಕೂಟ ಆಯೋಜಿಸಿದೆ.

ಬಂದ್ ಯಶಸ್ಸಿಗಾಗಿ ಖಾಸಗಿ ಸಾರಿಗೆ ಒಕ್ಕೂಟ ಪಣತೊಟ್ಟಿದೆ. ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಒಂದರಲ್ಲೇ 250ಕ್ಕೂ ಹೆಚ್ಚು ಬಸ್ ಸ್ತಬ್ದವಾಗಲಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ನೆರೆಯ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಇದರ ಪರಿಣಾಮ ಬೆಂಗಳೂರು ಜನಜೀವನದ ಮೇಲೆ ಸ್ವಲ್ಪ ಮಟ್ಟಿಗೆ ಬೀರುವ ಸಂಭವ ಇದೆ.  ಇದನ್ನೂ ಓದಿ: ಸನಾತನ ಧರ್ಮದವರನ್ನು ಕಾಗೆಗಳಿಗೆ ಹೋಲಿಸಿದ ಪ್ರಕಾಶ್ ರಾಜ್

ಖಾಸಗಿ ಸಮರ ಎದುರಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು, ಸರ್ವಾಜನಿಕರಿಗೆ ಯಾವುದೇ ಸಮಸ್ಯೆ ಆಗದೇ ಇರಲು ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಲು ಇಲಾಖೆ ಪ್ಲಾನ್‌ ಮಾಡಿದೆ. ಬಂದ್‌ನಿಂದ ಜನರಿಗೆ ತೊಂದರೆ ಆಗುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ.

ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್ ಬಗ್ಗೆ ಆಟೋ ಚಾಲಕರು ಬೆಂಬಲ ನೀಡಿದ್ದಾರೆ. ಸಾರಿಗೆ ಒಕ್ಕೂಟ ಕರೆದಿರುವ ಬಂದ್‌ಗೆ ನಾವು ಬೆಂಬಲ ನೀಡುತ್ತೇವೆ. ಶಕ್ತಿಯೋಜನೆ (Shakti Scheme) ಜಾರಿಯಾದ  ದಿನದಿಂದ ನಮಗೆ ಸಮಸ್ಯೆ ಆಗುತ್ತಿದೆ. ಅಷ್ಟೇ ಅಲ್ಲದೇ ರ‍್ಯಾಪಿಡೋ ಬಂದ್ ಮಾಡುವ ನಿರ್ಧಾರ ಸರ್ಕಾರ ಮಾಡಬೇಕು. ಯಾವುದೇ ಟ್ಯಾಕ್ಸ್ ಕೊಡದೇ ಅವರು ಬಾಡಿಗೆ ಹೋಗುತ್ತಿದ್ದಾರೆ. ಹಾಗಾಗಿ ರ‍್ಯಾಪಿಡೋ ವಾಹನಗಳನ್ನ ಬಂದ್ ಮಾಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.

ಪ್ರಮುಖ ಬೇಡಿಕೆಗಳೇನು?
– ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
– 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
– ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
– 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
– ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
– ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
– ಚಾಲಕರಿಗೆ ವಸತಿ ಯೋಜನೆ ನೀಡಬೇಕು

ಏನೆಲ್ಲಾ ಇರಲ್ಲ?
ಆಟೋ, ಖಾಸಗಿ ಟ್ಯಾಕ್ಸಿ, ಏರ್‌ಪೋರ್ಟ್ ಟ್ಯಾಕ್ಸಿ, ಶಾಲೆಗಳ ಖಾಸಗಿ ವಾಹನ, ಖಾಸಗಿ ಬಸ್, ಗೂಡ್ಸ್ ವಾಹನ

ಏನೆಲ್ಲಾ ಇರುತ್ತೆ?
ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಸರ್ಕಾರಿ ಟ್ಯಾಕ್ಸಿ (ಕೆಎಸ್‌ಟಿಡಿಸಿ), ರೈಲು, ಖಾಸಗಿ ಶಾಲೆ, ಚಿತ್ರರಂಗದ ಚಟುವಟಿಕೆ


Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್