ಬೆಂಗಳೂರಿನಲ್ಲಿ ಭಾರೀ ಮಳೆ – ಕರಾವಳಿ, ಉತ್ತರ ಕರ್ನಾಟಕದಲ್ಲಿ ಬಿಸಿಲು

Public TV
1 Min Read

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾದರೆ (Rain) ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ತಾಪಮಾನ ಹೆಚ್ಚಾಗುತ್ತಿದೆ.

ಬೆಂಗಳೂರಿನಲ್ಲಿ (Bengaluru) ಸೋಮವಾರ ರಾತ್ರಿ ಜೋರಾಗಿ ಮಳೆ ಸುರಿದಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ. ಇದನ್ನೂ ಓದಿ: ಗುರುವಿನ ಋಣ ತೀರಿಸಲು ರಾಜಕೀಯ ನಿವೃತ್ತಿ ಘೋಷಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟಿ

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಮಳೆ/ಗುಡುತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಉಷ್ಣಾಂಶ ಇನ್ನಷ್ಟು ಹೆಚ್ಚಾಗಲಿದೆ.

Share This Article