ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮೇ 9ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರ ಮಳೆ ಬೀಳಲಿದೆ. ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ ಬೆಳಗಾವಿ, ಬೀದರ್, ಧಾರವಾಡ, ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಎರಡು ದಿನ ಒಣ ಹವೆ ಇರಲಿದೆ. ಮೇ 5 ರಿಂದ ಕೊಪ್ಪಳ, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 33-22
ಮಂಗಳೂರು: 34-27
ಶಿವಮೊಗ್ಗ: 36-23
ಬೆಳಗಾವಿ: 34-21
ಮೈಸೂರು: 34-22

ಮಂಡ್ಯ: 34-22
ಮಡಿಕೇರಿ: 30-21
ರಾಮನಗರ: 34-23
ಹಾಸನ: 33-21
ಚಾಮರಾಜನಗರ: 33-23
ಚಿಕ್ಕಬಳ್ಳಾಪುರ: 34-22

ಕೋಲಾರ: 34-22
ತುಮಕೂರು: 35-22
ಉಡುಪಿ: 34-27
ಕಾರವಾರ: 32-28
ಚಿಕ್ಕಮಗಳೂರು: 31-20
ದಾವಣಗೆರೆ: 37-23

ಹುಬ್ಬಳ್ಳಿ: 36-22
ಚಿತ್ರದುರ್ಗ: 36-23
ಹಾವೇರಿ: 36-23
ಬಳ್ಳಾರಿ: 39-26
ಗದಗ: 36-22
ಕೊಪ್ಪಳ: 38-24

ರಾಯಚೂರು: 41-29
ಯಾದಗಿರಿ: 40-28
ವಿಜಯಪುರ: 40-26
ಕಲಬುರಗಿ: 39-28
ಬಾಗಲಕೋಟೆ: 38-24

