ಶಕ್ತಿಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಕಂಡಕ್ಟರ್‌ ಆಗಿ ಟಿಕೆಟ್‌ ಹಂಚಿದ ಸಿಎಂ

Public TV
1 Min Read

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು (Ticket) ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿತರಿಸಿದರು.

ಟಿಕೆಟ್‌ ವಿತರಿಸಿದ ನಂತರ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು. ಇದನ್ನೂ ಓದಿ: ಕೆಲಸಕ್ಕೆ ಬಾರದವರೆಲ್ಲ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ನಟಿಯೆಂದು ಹೇಳ್ಕೊತಾರೆ, ಇವ್ರು ಇದನ್ನೆಲ್ಲ ಮಾಡ್ಲೇ ಇಲ್ಲ ರಾಜೇಂದ್ರ ಸಿಂಗ್ ಬಾಬು

ಕಾಂಗ್ರೆಸ್ ಸರ್ಕಾರವು ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯದೊಳಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ನಿಟ್ಟಿನಲ್ಲಿ ‘ಶಕ್ತಿ’ ಯೋಜನೆಯನ್ನು 2023ರ ಜೂನ್ 11ರಿಂದ ಜಾರಿ ಮಾಡಿದೆ. ಈ ಯೋಜನೆಯಡಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‍ಡಬ್ಲ್ಯೂಆರ್‌ಟಿಸಿ ಸಾರಿಗೆ ಬಸ್‍ಗಳಲ್ಲಿ ಮಹಿಳೆಯರು ರಾಜ್ಯದೊಳಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದನ್ನೂ ಓದಿ: ಸಿಗಂದೂರು ಸೇತುವೆ| ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ಬೇರೆ ದಿನ ನಿಗದಿಗೆ ಸಿಎಂ ಪತ್ರ

ರಾಜ್ಯದ ಸಾರಿಗೆ ನಿಗಮಗಳ ಬಸ್‍ಗಳಲ್ಲಿ ಪ್ರತಿನಿತ್ಯ ಸುಮಾರು ಒಂದು ಕೋಟಿಗೂ ಅಧಿಕ ಮಂದಿ ಪ್ರಯಾಣಿಸುತ್ತಾರೆ. ಅದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ 80 ಲಕ್ಷ ಇದ್ದು, ‘ಶಕ್ತಿ ಯೋಜನೆ’ಯಡಿ ಪ್ರತಿನಿತ್ಯ 20 ಕೋಟಿ ರೂ.ಗಳಷ್ಟು ಉಚಿತ ಟಿಕೆಟ್ ಅನ್ನು ಮಹಿಳೆಯರಿಗೆ ವಿತರಿಸಲಾಗುತ್ತಿದೆ.

Share This Article