ಬಟ್ಟೆ ವ್ಯಾಪಾರಿಯ ಹಣ ಎಗರಿಸಿದ್ದ ಆರೋಪಿ 24 ಗಂಟೆಯಲ್ಲಿ ಅರೆಸ್ಟ್

Public TV
1 Min Read

ಕಾರವಾರ: ಬಟ್ಟೆ ವ್ಯಾಪಾರಿಯಿಂದ ಹಣದ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು (Police) 24 ಗಂಟೆಯಲ್ಲೇ ಬಂಧಿಸಿದ ಪ್ರಕರಣ ನಗರದಲ್ಲಿ (Karwar) ನಡೆದಿದೆ.

ಹಜರತ್ ಅಲಿ ಎಂಬಾತ ಬಂಧಿತ ಆರೋಪಿ. ಈತ ಬಟ್ಟೆ ವ್ಯಾಪಾರಿ ನಾಸೀರ್ ಹುಸೇನ್ ಎಂಬುವವರ 50 ಸಾವಿರ ರೂ. ಹಣವಿದ್ದ ಬ್ಯಾಗ್‌ನ್ನು ಕದ್ದು ಪರಾರಿಯಾಗಿದ್ದ. ರಾಷ್ಟ್ರೀಯ ಹೆದ್ದಾರಿ 66ರ ಹಳೆ ಮೀನು ಮಾರುಕಟ್ಟೆ ಎದುರು ಶೌಚಾಲಯಕ್ಕೆ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದಿದ್ದ ಆರೋಪಿ ಹಣ ಎಗರಿಸಿದ್ದ. ಈ ಸಂಬಂಧ ನಾಸಿರ್ ಅವರು ಕಾರವಾರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ಉಪೇಂದ್ರ ಬಳಿಕ ಸಚಿವ ಮಲ್ಲಿಕಾರ್ಜುನ್ ವಿರುದ್ಧವೂ ದೂರು

ತಕ್ಷಣ ಕಾರ್ಯಪ್ರವೃತ್ತರಾದ ನಗರ ಠಾಣೆ ಇನ್ಸ್ಪೆಕ್ಟರ್ ಸಿದ್ಧಪ್ಪ ಬಿಳಗಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ. ಪ್ರಕರಣದ ವಿಚಾರವಾಗಿ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮದುವೆಯಾದಾಗಿಂದಲೂ ಲೈಂಗಿಕ ಸಂಪರ್ಕ ಮುಂದೂಡುತ್ತಿದ್ದ ಪತಿ – ಸಲಿಂಗಿ ಗಂಡನಿಂದ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಟೆಕ್ಕಿ ಪತ್ನಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್