ಕಾರವಾರ: ನೇಣು ಬಿಗಿದುಕೊಂಡು ಪೊಲೀಸ್ ಕಾನ್‍ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದಲ್ಲಿ ನಡೆದಿದೆ.
ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡ ಕಾನ್‍ಸ್ಟೇಬಲ್. ಕಾರವಾರದ ಡಿ.ಎ.ಆರ್ ಕಚೇರಿಯಲ್ಲಿ ಇಂದು ಕರ್ತವ್ಯಕ್ಕೆ ಹಾಜರಾಗಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಕಳೆದ ನಾಲ್ಕು ದಿನದ ಹಿಂದೆ ರಜೆಯ ಮೇಲೆ ಹೊನ್ನಾವರ ತಾಲೂಕಿನ ಹಳದಿಪುರಕ್ಕೆ ತೆರಳಿದ್ದರು. ನಂತರ ಇಂದು ಕಚೇರಿಗೆ ಆಗಮಿಸಿದ್ದರು. ಪೊಲೀಸ್ ನೌಕರರ ಸಹಕಾರಿ ಸಂಘದ ಕಚೇರಿಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಗುರುಪ್ರಸಾದ್ ನಾಯ್ಕ ಅವರು ಡಿ.ಎ.ಆರ್ ಪೊಲೀಸ್ ತರಬೇತಿ ಶಾಲೆಯಲ್ಲಿ ಶಿಕ್ಷಕರಾಗಿಯೂ ಕಾರ್ಯನಿರ್ವಹಿಸುತಿದ್ದರು. ಇವರು ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚು ಹೆಸರನ್ನು ಗಳಿಸಿದ್ದರು. ಇದನ್ನೂ ಓದಿ: ವೀಡಿಯೋ: ಆರತಿ ಬೆಳಗಿ ಮುದ್ದಿನ ಶ್ವಾನದ ಹುಟ್ಟುಹಬ್ಬ ಆಚರಿಸಿದ ಸುಧಾಮೂರ್ತಿ!
ಆತ್ಮಹತ್ಯೆಗೆ ಕಾರಣವೇನೆಂದು ಈವರೆಗೂ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.