ಕೆ-ಸೆಟ್ 2024 ಫಲಿತಾಂಶ ಪ್ರಕಟ – 6,302 ಅಭ್ಯರ್ಥಿಗಳು ಅರ್ಹ

Public TV
1 Min Read

ಬೆಂಗಳೂರು: 2024ನೇ ಸಾಲಿನ ಕೆ-ಸೆಟ್‌ (ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ) ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನ (KCET Result) ಶನಿವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ.

ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ ಒಟ್ಟು 41 ವಿಷಯಗಳಿಗೆ ಕಳೆದ ನ. 24ರಂದು ಪರೀಕ್ಷೆ ನಡೆಸಲಾಗಿತ್ತು. ಒಟ್ಟು 6,302 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ (H Prasanna) ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಜಮ್ಮುವಿನ ಬಂಡಿಪೋರಾದಲ್ಲಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ – ನಾಲ್ವರು ಯೋಧರು ಹುತಾತ್ಮ!

1,06,433 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. 89,416 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅರ್ಹತೆ ಪಡೆದ 6,302 ಅಭ್ಯರ್ಥಿಗಳಲ್ಲಿ 3,275 ಪುರುಷರು, 3,020 ಮಹಿಳೆಯರು ಹಾಗೂ 7 ತೃತೀಯ ಲಿಂಗಿಗಳು, 293 ಅಂಗವಿಕಲರು ಇದ್ದಾರೆ. ಅರ್ಹತೆ ಹೊಂದಿದ ಅಭ್ಯರ್ಥಿಗಳ ಸಂಖ್ಯೆ ಶೇ 6ರಷ್ಟಿದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ದಲಿತ ಕುಟುಂಬಕ್ಕೆ ಮನೆ ಬಾಡಿಗೆ ಕೊಟ್ಟಿದ್ದಕ್ಕೆ ಸವರ್ಣೀಯ ಕುಟುಂಬಕ್ಕೆ ಬಹಿಷ್ಕಾರ!

ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ ಪಟ್ಟಿ ಸಿದ್ಧಪಡಿಸಲಾಗಿದೆ. ದಾಖಲೆಗಳ ಪರಿಶೀಲನೆ ಬಳಿಕ ಅರ್ಹರಿಗೆ ಪ್ರಮಾಣಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು 

Share This Article