– ಆಕ್ಷೇಪಣೆ ಸಲ್ಲಿಸಲು ಏ.30 ಕೊನೆ ದಿನ

ಬೆಂಗಳೂರು: 2026ರ ಸಿಇಟಿ ಪರೀಕ್ಷೆಯ (CET Exam) ಕೀ ಉತ್ತರಗಳನ್ನು (Key Answers) ಕೆಇಎ (KEA) ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಏಪ್ರಿಲ್ 23 ಮತ್ತು 24ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಈ ಕೀ ಉತ್ತರಗಳಿಗೆ ಆಕ್ಷೇಪಣೆಗಳು ಏನಾದರು ಇದ್ದರೆ ಏ.30ರೊಳಗೆ ಸಲ್ಲಿಸಬೇಕು. ಇದಕ್ಕೆ ಆನ್‌ಲೈನ್ ಲಿಂಕ್ ಕೂಡ ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳ ಜೊತೆಗೆ ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ಇತ್ಯಾದಿ ಮಾಹಿತಿಯನ್ನು ನಿಖರವಾಗಿ ದಾಖಲಿಸಬೇಕು ಎಂದು ಕೆಇಎ ತಿಳಿಸಿದೆ. ಇದನ್ನೂ ಓದಿ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ!

#UGCET-2026: ಇದೇ 23 ಮತ್ತು 24ರಂದು ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು #KEA ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಈ ಕೀ ಉತ್ತರಗಳಿಗೆ ಆಕ್ಷೇಪಣೆಗಳು ಏನಾದರು ಇದ್ದರೆ ಏ.30ರೊಳಗೆ ಸಲ್ಲಿಸಬೇಕು. ಇದಕ್ಕೆ ಆನ್ ಲೈನ್ ಲಿಂಕ್ ಕೂಡ ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳ ಜತೆಗೆ ಪ್ರಶ್ನೆ ಸಂಖ್ಯೆ,… pic.twitter.com/9nJbHpMkna
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 27, 2026

ಅಪೂರ್ಣ ಮಾಹಿತಿಯ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ. ಈ ವಿಚಾರದಲ್ಲಿ ವಿಷಯ ತಜ್ಞರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕೆಇಎ ಮಾಹಿತಿ ನೀಡಿದೆ. ಇದನ್ನೂ ಓದಿ: ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – ವೈದ್ಯರಿಲ್ಲದೆ ಮಹಿಳೆಯರಿಂದಲೇ ಹೆರಿಗೆ

