ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ

Public TV
1 Min Read

– ಪೈಲೆಟ್‌ಗೆ ಗಾಯ, ಪ್ರಯಾಣಿಕರು ಸೇಫ್

ಡೆಹ್ರಾಡೂನ್: ಟೇಕ್ ಆಫ್ ವೇಳೆ ತಾಂತ್ರಿಕ ದೋಷ ಉಂಟಾದ ಪರಿಣಾಮ ಕೇದಾರನಾಥಕ್ಕೆ (Kedarnath) ತೆರಳುತ್ತಿದ್ದ ಹೆಲಿಕಾಪ್ಟರ್ (Helicopter) ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದ ಘಟನೆ ಉತ್ತರಾಖಂಡದ (Uttarakhand) ರುದ್ರಪ್ರಯಾಗದಲ್ಲಿ ನಡೆದಿದೆ.

ಘಟನೆಯಲ್ಲಿ ಪೈಲೆಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲಿಕಾಪ್ಟರ್‌ನಲ್ಲಿ ಪೈಲೆಟ್ ಹಾಗೂ ಐದು ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಈ ಹೆಲಿಕಾಪ್ಟರ್ ಕ್ರೆಸ್ಟೆಲ್ ವಿಮಾನಯಾನ ಸಂಸ್ಥೆಗೆ ಸೇರಿದೆ. ಇದನ್ನೂ ಓದಿ: ಮಂಗಳೂರು| ಸೆಮಿನಾರ್ ತಪ್ಪಿಸಲು ವಿದ್ಯಾರ್ಥಿನಿಯಿಂದಲೇ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ

ಈ ಹೆಲಿಕಾಪ್ಟರ್ ರುದ್ರಪ್ರಯಾಗ (Rudraprayag) ಜಿಲ್ಲೆಯ ಬಡಾಸು ಪ್ರದೇಶದ ಹೆಲಿಪ್ಯಾಡ್‌ನಿಂದ ಮಧ್ಯಾಹ್ನ 12:52ಕ್ಕೆ ಹೊರಟಿತ್ತು. ಆದರೆ ಟೇಕ್ ಆಫ್ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಹೆದ್ದಾರಿಯಲ್ಲಿಯೇ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ. ತುರ್ತು ಭೂಸ್ಪರ್ಶದ ವೇಳೆ ಹೆಲಿಕಾಪ್ಟರ್‌ನ ಹಿಂಭಾಗ ಕಾರಿಗೆ ತಾಗಿದ್ದು, ಕಾರು ಜಖಂಗೊಂಡಿದೆ. ಇದನ್ನೂ ಓದಿ: ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ 17 ವರ್ಷ ಕಳೆದ IISC ಪ್ರೊಫೆಸರ್ ಮಾಧವಿ ಲತಾ

Share This Article