ಕೀರ್ತಿ ಸುರೇಶ್ ನಟನೆಯ ಮೊದಲ ಬಾಲಿವುಡ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್

By
1 Min Read

ಸೌತ್‌ನ ‘ಮಹಾನಟಿ’ ಕೀರ್ತಿ ಸುರೇಶ್ (Keerthy Suresh) ನಟನೆಯ ಮೊದಲ ಬಾಲಿವುಡ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಮೂಲಕ ಅಭಿಮಾನಿಗಳಿಗೆ ನಟಿ ಸಿಹಿಸುದ್ದಿ ನೀಡಿದ್ದಾರೆ. ಇದನ್ನೂ ಓದಿ:‘ರಾಬರ್ಟ್’ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ

ಚಿತ್ರರಂಗದಲ್ಲಿ ಸೌತ್ ಸಿನಿಮಾಗಳಿಗೆ ಭಾರೀ ಬೇಡಿಕೆಯಿದೆ. ಹಿಂದಿ ಸಿನಿಮಾಗಳ ಮುಂದೆ ದಕ್ಷಿಣದ ಸಿನಿಮಾಗಳು ಗೆದ್ದು ಬೀಗುತ್ತಿವೆ. ಹಾಗಾಗಿ ಬಾಲಿವುಡ್ ಹೀರೋಗಳಿಗೆ ಸೌತ್ ನಟಿಯರನ್ನು ಜೋಡಿ ಮಾಡಿ ಗೆಲ್ಲುವ ತಂತ್ರ ರೂಪಿಸುತ್ತಿದ್ದಾರೆ. ಈಗ ಸೌತ್ ಬೇಡಿಕೆಯ ನಟಿ ಕೀರ್ತಿ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ.

ವರುಣ್ ಧವನ್ ನಟನೆಯ ‘ಬೇಬಿ ಜಾನ್’ (Baby John) ಸಿನಿಮಾದಲ್ಲಿ ಕೀರ್ತಿ ನಾಯಕಿಯಾಗಿದ್ದಾರೆ. ಜವಾನ್ ಡೈರೆಕ್ಟರ್ ಅಟ್ಲಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ರಿಲೀಸ್‌ಗೆ ಕಾಯುತ್ತಿದ್ದವರಿಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ಡಿಸೆಂಬರ್ 25ರಂದು ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಕ್ರಿಸ್‌ಮಸ್ ಸಂದರ್ಭದಲ್ಲಿ ರಿಲೀಸ್ ಆಗಲಿದೆ.

ವರುಣ್ ಧವನ್‌ಗೆ ಮೊದಲ ಬಾರಿಗೆ ಕೀರ್ತಿ ಜೋಡಿಯಾಗಿ ನಟಿಸಿರೋದ್ರಿಂದ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ. ಸಿನಿಮಾಗಾಗಿ ಎದುರು ನೋಡ್ತಿದ್ದಾರೆ.

Share This Article