ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ- ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ

1 Min Read

ಬಳ್ಳಾರಿ: ಕೇರಳದಿಂದ (Kerala) ಹಂಪಿಗೆ (Hampi) ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ.

ತ್ರಿಶೂರ್ ಜಿಲ್ಲೆಯ ಶ್ರೀಕೃಷ್ಣ ಕಾಲೇಜು ವಿದ್ಯಾರ್ಥಿಗಳಿದ್ದ ಮಿನಿ ಬಸ್ (Tourist Bus) ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿ, 7 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದ್ದರೆ  ಶಿಕ್ಷಕಿ ಡಾ.ರಶ್ಮಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ:  ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ

ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೂಡಿಸಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article