ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ; ತನಿಖೆ ಕೈಗೊಳ್ಳಲು SITಗೆ ಕೇರಳ ಹೈಕೋರ್ಟ್ ಸೂಚನೆ

Public TV
1 Min Read

– 6 ವಾರಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನಿರ್ದೇಶನ

ತಿರುವನಂತಪುರಂ: ಶಬರಿಮಲೆ (Sabarimala Ayyappan Temple) ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಕೇಸ್ ದಾಖಲಿಸಿ ತನಿಖೆ ಆರಂಭಿಸಲು ಕೇರಳ ಹೈಕೋರ್ಟ್ ಸೂಚನೆ ನೀಡಿದೆ.

ನ್ಯಾ.ರಾಜಾ ವಿಜಯರಾಘವನ್, ನ್ಯಾ.ಕೆವಿ ಜಯಕುಮಾರ್ ಇದ್ದ ಪೀಠ, ದ್ವಾರಗಳಿಗೆ ಚಿನ್ನ ಲೇಪನ ವೇಳೆ ಚಿನ್ನ (Gold) ಕಳುವಾಗಿದೆ ಅನ್ನೋದನ್ನು ಗಮನಿಸಿ ಈ ನಿರ್ದೇಶನ ನೀಡಿದ್ದಾರೆ. ಅಲ್ಲದೇ, 6 ವಾರಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯದ ನಿರ್ದೇಶನ ನೀಡಿದೆ.

Sabarimala Temple

ತನಿಖೆಯನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಬೇಕು. ತನಿಖೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಸೋರಿಕೆ ಮಾಡಬಾರದು. ವಿಶೇಷ ತನಿಖಾ ತಂಡವು ನೇರವಾಗಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. ಶಬರಿಮಲೆ ವಿಷಯದ ಕುರಿತು ಚಿನ್ನದ ಲೇಪನಕ್ಕೆ ಮುಂದಾಗಿದ್ದ ಉನ್ನಿಕೃಷ್ಣನ್ ಪೊಟ್ಟಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸೋದನ್ನು ಹೈಕೋರ್ಟ್ (Kerala High Court) ನಿಷೇಧಿಸಿದೆ. ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಸಹ ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡಲಾಗಿದೆ.

Sabarimala Temple

ಏನಿದು ಪ್ರಕರಣ?
ಇತ್ತೀಚೆಗಷ್ಟೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ (Sabarimala Ayyappan Temple) ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಹಳೆಯ ತಾಮ್ರ ಮತ್ತು ಚಿನ್ನದ (Gold) ಲೇಪನ ಮೂರ್ತಿಗಳ ತೂಕದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಆಯುಕ್ತರು ಆರೋಪಿಸಿದ್ದರು.

2019ರಲ್ಲಿ ದೇವರ ಮೂರ್ತಿಗಳಿಗೆ ಪುನರ್‌ಲೇಪನ ಮಾಡಲಾಗಿತ್ತು. ಈ ವೇಳೆ ತಾಮ್ರದ ಮೂರ್ತಿಗೆ ಹೊದಿಸಿದ್ದ ಚಿನ್ನದ ಕವಚದಲ್ಲಿ 4.5 ಕೆಜಿ ಚಿನ್ನ ಕಳ್ಳತನವಾಗಿದೆ ಎಂಬ ಆರೋಪ ಕೇಳಿಬಂದಿದೆ.

Share This Article