ಬೆಂಗಳೂರು: ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ (H.D.Kumaraswamy) ಹೈಕೋರ್ಟ್ ಶಾಕ್ ಕೊಟ್ಟಿದೆ.
ಎಸ್‌ಐಟಿ ರಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಈ ಆದೇಶಕ್ಕೆ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಷಿ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿದೆ. ನವೆಂಬರ್ 26 ರವರೆಗೆ ಏಕಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಇದನ್ನೂ ಓದಿ: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್
ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ಎಸ್ಐಟಿ ರಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
6 ಎಕರೆ ಒತ್ತುವರಿ ತೆರವಿಗೆ ಸರ್ಕಾರ ಕ್ರಮ ಕೈಗೊಂಡಿದೆ. ದಾಖಲೆಗಳನ್ನು ಹಾಜರುಪಡಿಸುವಂತೆ ಎಸ್ಐಟಿ ನೋಟಿಸ್ ಜಾರಿಗೊಳಿಸಿದೆ. ಆದರೆ, ಎಸ್ಐಟಿ ರಚನೆಗೆ ಏಕಸದಸ್ಯ ಪೀಠ ತಡೆ ನೀಡಿದೆ. ಹೀಗಾಗಿ, ತಡೆಯಾಜ್ಞೆ ತೆರವಿಗೆ ಎಜಿ ಶಶಿಕಿರಣ್ ಶೆಟ್ಟಿ ಮನವಿ ಮಾಡಿದರು.
ಈಗ ಹೈಕೋರ್ಟ್ ಆದೇಶದಿಂದ ಎಸ್ಐಟಿ ತನಿಖೆ ಮುಂದುವರಿಯಲಿದೆ. ಇದನ್ನೂ ಓದಿ: ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣ; ಹೆಚ್‌ಡಿಕೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂ