ಖಲಿಸ್ತಾನಿ ನಾಯಕರು ಮಾನವ ಬಾಂಬರ್‌ಗಳನ್ನ ರೂಪಿಸುತ್ತಿದ್ದಾರೆ – ಗುಪ್ತಚರ ಇಲಾಖೆ ಮಾಹಿತಿ

Public TV
1 Min Read

ಚಂಡೀಗಢ: ಖಲಿಸ್ತಾನ್‌ (Khalistan) ಪರ ಸಹಾನುಭೂತಿ ಹೊಂದಿರುವ ಸಿಖ್‌ ಮೂಲಭೂತವಾಗಿ ಧರ್ಮ ಪ್ರಚಾರ ಅಮೃತ್‌ಪಾಲ್‌ ಸಿಂಗ್‌ (Amritpal Singh), ವ್ಯಸನಮುಕ್ತ ಕೇಂದ್ರಗಳು ಮತ್ತು ಗುರುದ್ವಾರದಲ್ಲಿ ಶಸ್ತ್ರಾಸ್ತ್ರಗಳ ಸಂಗ್ರಹ ಮಾಡುತ್ತಿದ್ದಾರೆ. ಅಲ್ಲದೇ ಯುವಕರನ್ನು ಆತ್ಮಾಹುತಿ ದಾಳಿಗೆ ತಯಾರಿಸುತ್ತಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಬೆನ್ನಲ್ಲೇ ಭದ್ರತಾ ಪಡೆ ಎಚ್ಚೆತ್ತುಕೊಂಡಿದ್ದಾರೆ.

ಕಳೆದ ವರ್ಷ ಸಿಂಗ್‌ ದುಬೈನಿಂದ ಬಂದಿದ್ದ. ಪಾಕಿಸ್ತಾನದ ಐಎಸ್‌ಐ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿರುವ ಅಮೃತ್‌ಪಾಲ್‌ ಸಿಂಗ್‌, ಯುವಕರನ್ನು ಮಾನವ ಬಾಂಬರ್‌ಗಳಾಗಲು ಮನವೊಲಿಸುವ ಕಾರ್ಯ ಮಾಡುತ್ತಿದ್ದಾನೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಭಾರತ ಧ್ವಜ ಕೆಳಗಿಳಿಸಿ ಖಲಿಸ್ತಾನ್‌ ಧ್ವಜ ಹಾರಿಸಿದ ಪ್ರತ್ಯೇಕತಾವಾದಿಗಳು – ಭಾರತ ಸರ್ಕಾರ ಬೇಸರ

ಕೋಮು ಸಂಘರ್ಷ ಹರಡಲು ಯತ್ನಿಸಿದ ಆರೋಪದ ಮೇಲೆ ಅಮೃತ್‌ಪಾಲ್‌ ಸಿಂಗ್‌ ವಿರುದ್ಧ ಪಂಜಾಬ್‌ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಿಂಗ್‌ನ 80ಕ್ಕೂ ಹೆಚ್ಚು ಬೆಂಬಲಿಗರನ್ನು ಬಂಧಿಸಿದ್ದಾರೆ. ಅಮೃತ್‌ಪಾಲ್‌ನನ್ನೂ ಸಹ ಬಂಧಿಸಿ ಅಜ್ಞಾತ ಸ್ಥಳದಲ್ಲಿ ಪೊಲೀಸರು ಇರಿಸಿಕೊಂಡಿದ್ದಾರೆ ಎಂದು ಆತನ ಸಂಬಂಧಿಕರು ಆರೋಪಿಸಿದ್ದಾರೆ.

ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಮವಸ್ತ್ರ ಮತ್ತು ಜಾಕೆಟ್‌ಗಳನ್ನು ಪಂಜಾಬ್‌ (Punjab) ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮೂಲಭೂತವಾದಿ ಸಿಖ್ ಪ್ರಚಾರಕರ ಕಾರಿನಲ್ಲಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡು “ಎಕೆಎಫ್” ಎಂದು ಗುರುತಿಸಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಪರಾರಿ – ಪಂಜಾಬ್‌ ಹಲವೆಡೆ ಇಂಟರ್‌ನೆಟ್‌ ಸ್ಥಗಿತ

ವ್ಯಸನಮುಕ್ತ ಕೇಂದ್ರಗಳಲ್ಲಿ ದಾಖಲಾದ ಯುವಕರನ್ನು ಬಂದೂಕು ಸಂಸ್ಕೃತಿಯತ್ತ ಆಕರ್ಷಿಸಲಾಗುತ್ತಿದೆ. ಮಾನವ ಬಾಂಬರ್‌ಗಳಾಗಿ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್‌ ಅವರನ್ನು ಕೊಂದ ಭಯೋತ್ಪಾದಕ ದಿಲಾವರ್ ಸಿಂಗ್‌ನ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಯುವಕರ ಮನವೊಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *