ನಮ್ಮ ಸಿಂಹ ರಾಹುಲ್‌ ಗಾಂಧಿ ಗೆದ್ದಿದ್ದಾರೆ – ಸಂಸತ್‌ ಸದಸ್ಯತ್ವ ಅನರ್ಹತೆ ವಾಪಸ್‌ ಬೆನ್ನಲ್ಲೇ ಸಿಹಿ ಹಂಚಿ INDIA ಒಕ್ಕೂಟ ಸಂಭ್ರಮ

By
3 Min Read

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರ ಸಂಸತ್‌ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್‌ ಓಂ ಪ್ರಕಾಶ್‌ ಬಿರ್ಲಾ ವಾಪಸ್‌ ಅವರಿಂದು ವಾಪಸ್‌ ಪಡೆದಿದ್ದಾರೆ. ನಾಲ್ಕು ತಿಂಗಳ ಬಳಿಕ ಇಂದು ಸಂಸತ್‌ ಕಲಾಪಕ್ಕೆ ರಾಹುಲ್‌ ಗಾಂಧಿ ಹಾಜರಾಗಲಿದ್ದಾರೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು INDIA ಒಕ್ಕೂಟದ ನಾಯಕರಿಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ.

ಸೋಮವಾರ (ಆ.7) ಕಲಾಪ ಆರಂಭಗೊಳ್ಳುವುದಕ್ಕು ಮುನ್ನ ಪಕ್ಷದ ಕೊಠಡಿಯಲ್ಲಿ ನಡೆದ ಸರಳ ಸಭೆಯಲ್ಲಿ ಸಹಿ ಹಂಚಿ ಸಂಭ್ರಮಿಸಿದ್ದಾರೆ. ಈ ಕುರಿತು ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ಗಾಂಧಿ ಅವರನ್ನು ಸಂಸದರಾಗಿ ಮರುಸ್ಥಾಪಿಸುವ ನಿರ್ಧಾರ ಸ್ವಾಗತಾರ್ಹ. ಇನ್ನಾದರೂ ಬಿಜೆಪಿ (BJP) ಮತ್ತು ಮೋದಿ (Modi) ಸರ್ಕಾರ ತಮ್ಮ ಉಳಿದ ಅವಧಿಯಲ್ಲಿ ವಿಪಕ್ಷ ನಾಯಕರನ್ನ ಗುರಿಯಾಗಿಸುವ ಮೂಲಕ ಪ್ರಜಾಪ್ರಭುತ್ವ ಅವಮಾನಿಸುವ ಬದಲು ನಿಜವಾದ ಆಡಳಿತದ ಮೇಲೆ ಕೇಂದ್ರೀಕರಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್‌ ನಾಯಕ ಪ್ರಮೋದ್‌ ತಿವಾರಿ, ಸತ್ಯಕ್ಕೆ ಜಯ ಸಿಕ್ಕಿದೆ. ಇದರಿಂದ ಭಾರತವೇ ಗೆದ್ದಂತಾಗಿದೆ. ನಮ್ಮ ಸಿಂಹ ರಾಹುಲ್‌ ಗಾಂಧಿ ಗೆದ್ದಿದ್ದು, ಮೋದಿ ಜೀ ಅವರಿಗೆ ಸೋಲು ಆರಂಭವಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಅನರ್ಹತೆ ವಾಪಸ್ ಪಡೆದ ಲೋಕಸಭೆ ಸ್ಪೀಕರ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂಸತ್ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ವಾಪಸ್ ಪಡೆದಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ಸಂಸದೀಯ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಶುಕ್ರವಾರ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸ್ಪೀಕರ್ ಈ ನಿರ್ಧಾರ ಕೈಗೊಂಡಿದ್ದಾರೆ. ಇದನ್ನೂ ಓದಿ: ಭಾರತ ಮಾತೆಯನ್ನು ವಿರೋಧಿಸುವವರ ಪ್ರಾಣ ತೆಗೆಯಲು ನಾವು ಹಿಂಜರಿಯಲ್ಲ: ಬಿಜೆಪಿ ನಾಯಕ

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿ.ಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು. ಸುಪ್ರೀಂ ಆದೇಶ ಬೆನ್ನಲ್ಲೇ ಸೋಮವಾರ ಲೋಕಸಭೆಯ ಸ್ಪೀಕರ್ ಸದಸ್ಯತ್ವವನ್ನ ಮರಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭೆ ಅಧಿವೇಶನಕ್ಕೆ ಹಾಜರಾಗಲಿದ್ದಾರೆ.

ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್