‘ಮ್ಯಾಕ್ಸ್’ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ನಲ್ಲಿ ಕಿಚ್ಚ

Public TV
1 Min Read

ಕ್ರಿಕೆಟ್, ಬಿಗ್ ಬಾಸ್ ನಡುವೆಯೂ ನಿರೀಕ್ಷಿತ ಮ್ಯಾಕ್ಸ್ (Max) ಸಿನಿಮಾದ ಚಿತ್ರೀಕರಣ ಮುಗಿಸುತ್ತಿದ್ದಾರೆ ಕಿಚ್ಚ ಸುದೀಪ್. ಸದ್ಯ ಈ ಸಿನಿಮಾದ ಕ್ಲೈಮ್ಯಾಕ್ಸ್ (Climax) ಶೂಟಿಂಗ್ ನಡೆದಿದ್ದು, ಈ ಭಾಗದ ಚಿತ್ರೀಕರಣದಲ್ಲಿ (Shooting) ಸುದೀಪ್ ಭಾಗಿಯಾಗಿದ್ದಾರೆ.  ಅಂದುಕೊಂಡ ತಿಂಗಳಲ್ಲೇ ಸಿನಿಮಾ ತೆರೆಗೆ ತರಬೇಕಾಗಿದ್ದರಿಂದ ಚಿತ್ರೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದಾರಂತೆ.

‘ಮ್ಯಾಕ್ಸ್’ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಮಾಡಿದ ಮೇಲೆ ಸಿನಿಮಾ ಬಗ್ಗೆ ಯಾವುದೇ ಅಪ್‌ಡೇಟ್ ಸಿಕ್ಕಿರಲಿಲ್ಲ. ಈ ಕುರಿತಂತೆ ಚಿತ್ರದ ಕೆಲಸ ಎಲ್ಲಿಯವರೆಗೂ ಬಂತು ಎಂದು ಸ್ವತಃ ಸುದೀಪ್ (Sudeep) ಅವರೇ ಮೊನ್ನೆ ಮಾಹಿತಿ ನೀಡಿದ್ದರು.

ಬಹುನಿರೀಕ್ಷಿತ ಮ್ಯಾಕ್ಸ್ ಬಗ್ಗೆ ಸುದೀಪ್ ಮಾಹಿತಿ ನೀಡುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದರು. ‘ಸಂಕ್ರಾಂತಿ’ ನಂತರ ಮ್ಯಾಕ್ಸ್ ಸಿನಿಮಾದ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭ ಮಾಡುತ್ತಿದ್ದೇವೆ. ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ. ಚಿತ್ರದ ಉಳಿದ ಭಾಗಗಳ ಚಿತ್ರೀಕರಣ ಪ್ರಗತಿಯಲ್ಲಿದೆ ಎಂದು ಮೊನ್ನೆಯಷ್ಟೇ ಮಾಹಿತಿ ಹಂಚಿಕೊಂಡಿದ್ದರು.

 

‘ಮ್ಯಾಕ್ಸ್’ ಸಿನಿಮಾ ಬಗ್ಗೆ ಅಭಿಮಾನಿಗಳು ಪದೇ ಪದೇ ಅಪ್‌ಡೇಟ್ ಕೇಳುತ್ತಿದ್ದರು. ನಿಮ್ಮ ಪ್ರೀತಿ, ಕ್ಯೂರಿಯಾಸಿಟಿ ನನಗೆ ಅರ್ಥವಾಗುತ್ತದೆ. ಆದರೆ, ಸಿನಿಮಾ ಶೂಟ್ ಪೂರ್ಣಗೊಳ್ಳದೆ ಆ ಬಗ್ಗೆ ಅಪ್‌ಡೇಟ್ ನೀಡೋದು ಹೇಗೆ ಅನ್ನೋದು ಸುದೀಪ್ ಅವರ ಪ್ರಶ್ನೆಯಾಗಿತ್ತು. ನವೆಂಬರ್‌ನಲ್ಲಿ ಮಳೆಯಿಂದ ಶೂಟ್ ಮಾಡಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್‌ನಲ್ಲಿ ಕೆಲವು ಅಡೆತಡೆಗಳು ಎದುರಾದವು. ಈಗ ಸಂಕ್ರಾಂತಿ ಬಳಿಕ ಮತ್ತೆ ‘ಮ್ಯಾಕ್ಸ್’ ಶೂಟಿಂಗ್ ಶುರು ಆಗಿದೆ ಎಂದು ತಿಳಿಸಿದ್ದರು.

Share This Article