ನ್ಯಾಚುರಲ್ ಸ್ಟಾರ್ ನಾನಿಗೆ ಕಿಚ್ಚ ಸುದೀಪ್ ಸಾಥ್

Public TV
1 Min Read

ಸರಾ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನ್ಯಾಚುರಲ್ ಸ್ಟಾರ್ ನಾನಿ (Nani) ನಟಿಸುತ್ತಿರುವ 30ನೇ ಸಿನಿಮಾ ‘ಹಾಯ್ ನನ್ನಾ’ (Hi Nanna). ಟೀಸರ್ ಹಾಗೂ ಒಂದು ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಹಾಯ್ ನನ್ನಾ ಸಿನಿಮಾದ ಎರಡನೇ ಹಾಡು (Song) ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ವಿವರಣೆ ಬೇಕಿಲ್ಲ ಎಂಬ ಹಾಡು ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಮಗಳಲ್ಲ ನೀ ನನ್ನ ಅಮ್ಮ ಎಂಬ ಕನ್ನಡದ ಹಾಡನ್ನು ಕಿಚ್ಚ ಸುದೀಪ್ (Sudeep) ರಿಲೀಸ್ ಮಾಡಿ ನಾನಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ.

ಮಗಳಲ್ಲ ನೀ ನನ್ನ ಅಮ್ಮ ಹಾಡು ಅಪ್ಪ ಮಗಳ ನಡುವಿನ ಬಾಂಧವ್ಯದ ಗೀತೆಯಾಗಿದೆ. ಅಪ್ಪನಾಗಿ ನಾನಿ ಹಾಗೂ ಮಗಳಾಗಿ ಬೇಬಿ ಕಿಯಾರಾ ಖಾನ್ ನಟಿಸಿದ್ದಾರೆ. ಕವಿರಾಜ್ ಸಾಹಿತ್ಯ ಬರೆದಿರುವ ಹಾಡಿಗೆ ಹೃದಯ್ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಹಾಡಿಗೆ ಟ್ಯೂನ್ ಹಾಕಿ ಹಾಡಿಗೆ ಧ್ವನಿಯಾಗಿದ್ದಾರೆ. ಇದನ್ನೂ ಓದಿ: ಮಂತ್ರಿಯೊಂದಿಗೆ ನನ್ನ ಪತ್ನಿಗೆ ಅಫೇರ್ ಇತ್ತು- ಶಾಕಿಂಗ್ ಹೇಳಿಕೆ ಕೊಟ್ಟ ಸಂಜಯ್ ದತ್

ಹಾಯ್ ನಾನ್ನ ಸಿನಿಮಾಗೆ ಯುವ ನಿರ್ದೇಶಕ ಶೌರ್ಯುವ್ ಆಕ್ಷನ್ ಕಟ್ ಹೇಳಿದ್ದು, ನಿರ್ದೇಶಕನಾಗಿ ಇದು ಇವರ ಮೊದಲ ಚಿತ್ರವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂಧವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರ ಒಳಗೊಂಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದಾರೆ.

ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಮೋಹನ್ ಚೆರುಕುರಿ, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದ್ದು,  ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್