– ಸರೋಜಾದೇವಿ ನಿಧನಕ್ಕೆ ಸಂತಾಪ ಸೂಚಿಸಿದ ನಟ ದರ್ಶನ್
ಅಭಿನಯ ಸರಸ್ವತಿ ಎಂದೇ ಖ್ಯಾತಿಯಾಗಿರುವ ಬಿ.ಸರೋಜಾದೇವಿ ನಿಧನಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಹಾಗೂ ನಟ ದರ್ಶನ್ (Actor Darshan) ಸಂತಾಪ ಸೂಚಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಅಭಿನಯ ಸರಸ್ವತಿ ಎಂದೇ ಹೆಸರಾದ ಬಹುಭಾಷಾ ತಾರೆ ಸರೋಜಾದೇವಿ (B Saroja Devi) ಅವರು ತಮ್ಮ ಮೋಹಕತೆಯೊಂದಿಗೆ ಹೊರಟಿದ್ದಾರೆ. ಹಲವು ಭಾಷೆಗಳ ಪ್ರೌಡಿಮೆ ಹೊಂದಿದ್ದ ಅವರು ಅನೇಕ ದಿಗ್ಗಜರೊಂದಿಗೆ ನಟಿಸಿ ತಾನೇ ಪಾತ್ರವಾಗಿ ಬೆಳ್ಳಿತೆರೆಯಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಪಾರಿಜಾತ ಪುಷ್ಪವೊಂದು ತನ್ನ ಪರಿಮಳದೊಂದಿಗೆ ತುಂಬು ಜೀವನ ನೆಡೆಸಿ ನಮ್ಮನ್ನು ಅಗಲಿ ಹೊರಟಿದೆ. ನಮ್ಮ ಕಲಾ ಸರಸ್ವತಿಗೆ ವಿನಯಪೂರ್ವಕ ನಮನಗಳನ್ನು ತಿಳಿಸಿದ್ದಾರೆ.ಇದನ್ನೂ ಓದಿ: ಬಿ.ಸರೋಜಾದೇವಿ ನಿಧನಕ್ಕೆ ನಿಖಿಲ್ ಕುಮಾರಸ್ವಾಮಿ, ಆರ್.ಅಶೋಕ್ ಸಂತಾಪ
ಅಭಿನಯ ಸರಸ್ವತಿ ಎಂದೇ ಹೆಸರಾದ ಬಹುಭಾಷಾ ತಾರೆ ಶ್ರೀಮತಿ ಸರೋಜ ದೇವಿ ಅವರು ತಮ್ಮ ಮೋಹಕತೆಯೊಂದಿಗೆ ಹೊರಟಿದ್ದಾರೆ.ಹಲವು ಭಾಷೆಗಳ ಪ್ರೌಡಿಮೆ ಹೊಂದಿದ್ದ ಅವರು ಅನೇಕ ದಿಗ್ಗಜರೊಂದಿಗೆ ನಟಿಸಿ ತಾನೇ ಪಾತ್ರವಾಗಿ ಬೆಳ್ಳಿತೆರೆಯಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಪಾರಿಜಾತ ಪುಷ್ಪವೊಂದು ತನ್ನ ಪರಿಮಳದೊಂದಿಗೆ ತುಂಬು ಜೀವನ ನೆಡೆಸಿ ನಮ್ಮನ್ನು ಆಗಲಿ… pic.twitter.com/tlu6Tzfi4V
— Kichcha Sudeepa (@KicchaSudeep) July 14, 2025
ಇನ್ನೂ ಬಿ.ಸರೋಜಾದೇವಿ ನಿಧನಕ್ಕೆ ನಟ ದರ್ಶನ್ ಸಂತಾಪ ಸೂಚಿಸಿದ್ದಾರೆ. ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ.ಸರೋಜಾದೇವಿ ಅವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ದೇವರು ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಹಿರಿಯ ಕಲಾವಿದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
View this post on Instagram
1938ರ ಜ.7ರಂದು ಜನಿಸಿದ ಸರೋಜಾದೇವಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ನಿಧನರಾದರು.
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು. ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.ಇದನ್ನೂ ಓದಿ: ಸರೋಜಾ ದೇವಿ ಅಗಲಿಕೆಗೆ ಕಂಬನಿ ಮಿಡಿದ ಸ್ಯಾಂಡಲ್‍ವುಡ್ ನಟ, ನಟಿಯರು