‘ಪೌಡರ್’ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ ಕಿಚ್ಚ ಸುದೀಪ್

Public TV
2 Min Read

ನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಈ ಸಿನಿಮಾಗೆ ‘ಪೌಡರ್’ (Powder) ಎಂದು ಹೆಸರಿಡಲಾಗಿದೆ.

ಪೌಡರ್ ಚಿತ್ರದ ಮುಹೂರ್ತ (Muhurta) ಸಮಾರಂಭವು ವರಮಹಾಲಕ್ಷ್ಮೀ ಹಬ್ಬದಂದು ನಡೆದಿದ್ದು, ಕಿಚ್ಚ ಸುದೀಪ್ (Sudeep) ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ನಿರ್ಮಾಪಕ ಕಾರ್ತಿಕ್ ಗೌಡ ಅವರ ತಂದೆ ರಾಮಕೃಷ್ಣೇಗೌಡ ಕ್ಯಾಮೆರಾ ಸ್ವಿಚ್ ಆನ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಧನಂಜಯ್, ಸಂತೋಷ್ ಆನಂದರಾಮ್, ರೋಹಿತ್ ಪದಕಿ, ಧೀರೇನ್ ರಾಮಕುಮಾರ್, ನವೀನ್ ಶಂಕರ್, ಕೆ.ಮಂಜು, ಭೂಮಿ ಶೆಟ್ಟಿ, ನಾಗಭೂಷಣ್, ಟಿವಿಎಫ್ ಸಂಸ್ಥಾಪಕರಾದ ಅರುಣಭ್ ಕುಮಾರ್, ವಿಜಯ್ ಕೋಶಿ, ಚೈತನ್ಯ ಕುಂಬಕೋಣಂ ಮುಂತಾದವರು ಹಾಜರಿದ್ದರು.

ಪೌಡರ್ ಒಂದು ಹಾಸ್ಯಮಯ ಚಿತ್ರವಾಗಿದ್ದು, ಒಂದು ಸಣ್ಣ ಊರಿನ ಯುವಕರಿಗೆ ದೊಡ್ಡ ಪ್ರಮಾಣದ ಕೊಕೇನ್ ಸಿಗುತ್ತದೆ. ಒಂದು ಕಡೆ ಆ ಕೊಕೇನ್ ಗಾಗಿ ಹುಡುಕಾಟದಲ್ಲಿರುವ ದುಷ್ಟರ ಗುಂಪು. ಇನ್ನೊಂದು ಕಡೆ ಆ ಕೊಕೇನ್ ಮಾರಿ ದಿಢೀರ್ ಶ್ರೀಮಂತರಾಗಬೇಕೆಂಬ ಯುವಕರ ಗುಂಪು. ಮತ್ತೊಂದು ಕಡೆ ತಮ್ಮ ಅಧಿಪತ್ಯ ಸ್ಥಾಪಿಸುವುದಕ್ಕೆ ಪ್ರಯತ್ನಿಸುತ್ತಿರುವ ಒಬ್ಬ ಮಾಸ್ಟರ್ ಮೈಂಡ್. ಈ ಹಾವು-ಏಣಿ ಆಟದಲ್ಲಿ ಗೆಲ್ಲುವವರು ಯಾರು? ಎಂದು ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗುತ್ತಿದೆ.

ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ಈ ಬಹುತಾರಾಗಣದ ಚಿತ್ರದಲ್ಲಿ ದಿಗಂತ್, ಧನ್ಯ ರಾಮಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಅಚ್ಯುತ್ ಕುಮಾರ್, ರವಿಶಂಕರ್ ಗೌಡ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. ದೀಪಕ್ ವೆಂಕಟೇಶನ್ ಕಥೆ-ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಶಾಂತಿ ಸಾಗರ್ ಅವರ ಛಾಯಾಗ್ರಹಣವಿದೆ.  ನಮ್ಮ ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಟಿವಿಎಫ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ಪೌಡರ್. ಬಹು ತಾರಾಗಣವಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. 2024ರ ಏಪ್ರಿಲ್ 5 ಚಿತ್ರ‌ ಬಿಡುಗಡೆಯಾಗಲಿದೆ ಎಂದು ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ತಿಳಿಸಿದರು.

ಕೆ.ಆರ್‌.ಜಿ ಸ್ಟುಡಿಯೋಸ್ ಜೊತೆಗೂಡಿ ಈ ಚಿತ್ರ ನಿರ್ಮಾಣ ಮಾಡುತ್ತಿರುವುದಕ್ಕೆ ಟಿವಿಎಫ್ ಸಂಸ್ಥೆಯ ಅರುಣಭ್ ಕುಮಾರ್ ಸಂತಸ ವ್ಯಕ್ತಪಡಿಸಿದರು. ಕಾಮಿಡಿ ಜಾನರ್ ನ ಈ ಕಥೆ ಎಲ್ಲರಿಗೂ ಹಿಡಿಸಲಿದೆ ಎಂದರು ನಿರ್ದೇಶಕ ಜನಾರ್ದನ್ ಚಿಕ್ಕಣ್ಣ.  ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಟಿವಿಎಫ್ ಎರಡು ದೊಡ್ಡ ಸಂಸ್ಥೆಗಳು ಸೇರಿ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ನಟಿಸುತ್ತಿರುವುದು ಖುಷಿಯ ವಿಚಾರ ಎನ್ನುತ್ತಾರೆ ನಾಯಕ ದಿಗಂತ್ (Digant).  ಶರ್ಮಿಳಾ ಮಾಂಡ್ರೆ (Sharmila Mandre), ಧನ್ಯ (Dhanya Ram Kumar), ಅನಿರುದ್ಧ್ ಆಚಾರ್ಯ, ಅಚ್ಯುತ ಕುಮಾರ್, ರವಿಶಂಕರ್ ಗೌಡ ಮುಂತಾದ ಕಲಾವಿದರು “ಪೌಡರ್” ಬಗ್ಗೆ ಮಾತನಾಡಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್