‘ಮ್ಯಾಕ್ಸ್’ ಆಟ ಶುರು- ಮಾಸ್‌ ಆಗಿ ಎಂಟ್ರಿ ಕೊಟ್ಟ ಕಿಚ್ಚ ಸುದೀಪ್

Public TV
1 Min Read

ಹುನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ (Max Film) ಇಂದು (ಜು.16) ಟೀಸರ್ ಬಿಡುಗಡೆ ಮಾಡಿ ಎಲ್ಲೆಡೆ ಸದ್ದು ಮಾಡುತ್ತಿದೆ. ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಅವರನ್ನು ಕಂಡು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಟೀಸರ್‌ನಲ್ಲಿನ ಆ್ಯಕ್ಷನ್ ದೃಶ್ಯಗಳು ಮೈ ಜುಂ ಎನ್ನಿಸುವಂತಿದ್ದು ಮಾಸ್ ಅಭಿಮಾನಿಗಳ ಕಣ್ಮನ ಸೆಳೆದಿದೆ. ಇದನ್ನೂ ಓದಿ:ಕಾಮಿಡಿ ಸ್ಟಾರ್ ಈಗ ಸ್ಯಾಂಡಲ್‌ವುಡ್‌ನ ಬೇಡಿಕೆಯ ಖಡಕ್ ವಿಲನ್

ಪ್ಯಾನ್ ಇಂಡಿಯಾ ಚಿತ್ರವಾದ `ಮ್ಯಾಕ್ಸ್’ ಒಂದು ಮಾಸ್ ಚಿತ್ರವಾಗಿದ್ದು, ಟೀಸರ್‌ನಲ್ಲಿರುವ ಡೈಲಾಗ್ ತುಣುಕುಗಳು ಈಗಾಗಲೇ ಭರ್ಜರಿ ಸದ್ದು ಮಾಡಿ, ಸಿನಿ ಪ್ರೇಕ್ಷಕರು ಚಿತ್ರದ ಬರುವಿಕೆಯನ್ನು ಎದುರು ನೋಡುವಂತೆ ಮಾಡಿದೆ. ಬಾ ಬಾ ಬ್ಲ್ಯಾಕ್ ಶಿಪ್ ಹ್ಯಾವ್ ಯೂ ಎನಿ ಕ್ಲೂ ಎಂದು ಖಡಕ್ ಡೈಲಾಗ್ ಹೇಳುವ ಮೂಲಕ ಸುದೀಪ್ ಮಸ್ತ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ‘ಮ್ಯಾಕ್ಸ್’ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ.

ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

Share This Article