ಹೊಸ ವರ್ಷಕ್ಕೆ ಕಿಚ್ಚ ಕೊಟ್ರು ಗುಡ್ ನ್ಯೂಸ್: ಹೀರೋ ಆಗಿ ಸುದೀಪ್ ಅಕ್ಕನ ಮಗ ಎಂಟ್ರಿ

Public TV
2 Min Read

‘ಮ್ಯಾಕ್ಸ್’ (Max) ಸಿನಿಮಾದ ಸಕ್ಸಸ್ ಖುಷಿಯಲ್ಲಿರುವ ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಸುದ್ದಿ ಕೊಟ್ಟಿದ್ದಾರೆ. ಹೊಸ ವರ್ಷಕ್ಕೆ ನಟ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಕಿಚ್ಚನ ಕಡೆಯಿಂದ ಬಂದ ಸುದ್ದಿ ಕೇಳಿ ಫ್ಯಾನ್ಸ್ ಫುಲ್ ಥ್ರಿಲ್ ಆಗಿದ್ದಾರೆ. ಅಂದಹಾಗೆ, ಇದು ಸುದೀಪ್ ನಾಯಕನಾಗಿ ನಟಿಸುತ್ತಿರುವ ಸಿನಿಮಾ ಅಲ್ಲ, ಬದಲಾಗಿ ಸುದೀಪ್ ನಿರ್ಮಾಣ ಮಾಡುತ್ತಿರುವ ಚಿತ್ರ. ಇದನ್ನೂ ಓದಿ:ಹೊಸ ವರ್ಷದ ದಿನವೇ ‘ಡೆವಿಲ್’ ಚಿತ್ರದ ಡಬ್ಬಿಂಗ್‌ನಲ್ಲಿ ದರ್ಶನ್ ಬ್ಯುಸಿ

ಕಿಚ್ಚನ ಸುಪ್ರಿಯಾನ್ವಿ ಪ್ರೊಡಕ್ಷನ್ ಮತ್ತು KRG ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಸಿನಿಮಾ ಇದಾಗಿದೆ. ಈ ಸಿನಿಮಾಗೆ ನಾಯಕನಾಗಿ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕನಾಗಿ ನಟಿಸುತ್ತಿದ್ದಾರೆ. ಸಂಚಿತ್ ಚೊಚ್ಚಲ ಸಿನಿಮಾವಾಗಿದ್ದು, ಮೊದಲ ಸಿನಿಮಾಗೆ ಸುದೀಪ್ ಬಂಡವಾಳ ಹೂಡುತ್ತಿರೋದು ಸಿನಿಮಾ ಮೇಲಿನ ನಿರೀಕ್ಷೆಯನ್ನ ದುಪ್ಪಟ್ಟು ಮಾಡಿದೆ. ಇನ್ನು ‘ಎಕ್ಕ’ ಸಿನಿಮಾದ ಬಳಿಕ KRG ಸ್ಟುಡಿಯೋಸ್ ಮತ್ತೊಂದು ಸಿನಿಮಾ ಅನೌನ್ಸ್ ಮಾಡಿದೆ. KRG ಕಡೆಯಿಂದ ಬ್ಯಾಕ್‌ ಟು ಬ್ಯಾಕ್ ಸಿನಿಮಾಗಳು ಬರುತ್ತಿದೆ. ಸುದೀಪ್ ಸಹೋದರಿಯ ಪುತ್ರನ ಸಿನಿಮಾ ಆಗಿರೋದ್ರಿಂದ ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಸಂಚಿತ್ ಮೊದಲ ಸಿನಿಮಾಗೆ ವಿವೇಕ ನಿರ್ದೇಶನದ ಹೊಣೆಗಾರಿಕೆ ಹೊತ್ತಿದ್ದಾರೆ. ಇದು ನಿರ್ದೇಶಕರ ಚೊಚ್ಚಲ ಸಿನಿಮಾವಾಗಿದೆ.

ಈ ಮೊದಲು ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಕೆಲಸ ಮಾಡಿರೋ ಅನುಭವ ಹೊಂದಿರೋ ವಿವೇಕ, ಈಗ ಸ್ವತಂತ್ರ ನಿರ್ದೇಶಕನಾಗಿ ಸ್ಯಾಂಡಲ್ವುಡ್ ಎಂಟ್ರಿ ಕೊಡುತ್ತಿದ್ದಾರೆ. ಮೈಸೂರು ಮೂಲದ ವಿವೇಕ ಅವರು ಸಂಚಿತ್‌ಗೆ ವಿಭಿನ್ನ ಕಥೆಯನ್ನ ತೆರೆ ಮೇಲೆ ತರುವ ಪ್ರಯತ್ನ ಮಾಡ್ತಿದ್ದಾರೆ.

 

View this post on Instagram

 

A post shared by Sanchith Sanjeev (@sanchithsanjeev)

ಇದು ಕ್ರೈಂ ಥ್ರಿಲ್ಲರ್ ಸ್ಟೋರಿ ಆಗಿದ್ದು, ಈ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಜನವರಿ 24ರಂದು ಅದ್ಧೂರಿಯಾಗಿ ಲಾಂಚ್ ಆಗಲಿದೆ. ಮುಹೂರ್ತದ ಬಳಿಕ ಶೂಟಿಂಗ್ ಕೂಡ ಅಂದಿನಿಂದಲೇ ಪ್ರಾರಂಭವಾಗಲಿದೆ. ಇನ್ನು ಈ ಸಿನಿಮಾದ ನಾಯಕಿ ಯಾರು? ತಂತ್ರಜ್ಞರು ಯಾರು ಎನ್ನುವ ಅನೇಕ ಪ್ರಶ್ನೆಗಳಿಗೆ ಮುಹೂರ್ತದ ದಿನವೇ ಉತ್ತರ ಸಿಗಲಿದೆ.

Share This Article