ವಾಲ್ಮೀಕಿ, ವೀರಮದಕರಿ ನಾಯಕ ಮೂರ್ತಿ ಅನಾವರಣಗೊಳಿಸಿದ ಕಿಚ್ಚ ಸುದೀಪ್

Public TV
1 Min Read

ರಾಯಚೂರು: ಸಿರವಾರ ತಾಲೂಕಿನ ಕುರಕುಂದ ಗ್ರಾಮದಲ್ಲಿ ನಟ ಕಿಚ್ಚ ಸುದೀಪ್ ಮಹರ್ಷಿ ವಾಲ್ಮೀಕಿ ಹಾಗೂ ವೀರಮದಕರಿ ನಾಯಕ ಮೂರ್ತಿ ಅನಾವರಣಗೊಳಿಸಿದರು. ಈ ಹಿಂದೆ ಸುದೀಪ್ ಅಭಿಮಾನಿಗಳು ಸುದೀಪ್ ಮೂರ್ತಿಯನ್ನೇ ಪ್ರತಿಷ್ಠಾಪಿಸಿ ಪೂಜಿಸಲು ಮುಂದಾಗಿದ್ದರು. ಆದ್ರೆ ಸುದೀಪ್ ತಮ್ಮ ಮೂರ್ತಿ ಸ್ಥಾಪನೆಗೆ ಒಪ್ಪದ ಹಿನ್ನೆಲೆ ವಿಚಾರ ಕೈಬಿಡಲಾಗಿತ್ತು.

ರಾಯಚೂರಿನ ಸಿರವಾರ ತಾಲೂಕಿನ ಕುರಕುಂದದಲ್ಲಿ ಮಾತನಾಡುವ ಸುದೀಪ್, ನನ್ನ ಮೂರ್ತಿ ಪ್ರತಿಷ್ಟಾಪನೆಗೆ ಹೊರಟಿದ್ದ ಅಭಿಮಾನಿಗಳ ಪ್ರೀತಿಗೆ ನಾನು ಶರಣು. ನನ್ನ ಮೂರ್ತಿ ಅನಾವರಣಕ್ಕೆ ನಾನು ಹೇಗೆ ಒಪ್ಪಿಕೊಳ್ಳಲಿ ಅದಕ್ಕೆ ಬೇಡ ಅಂದೆ. ತುಂಬಾ ಜನ ಸಾಧನೆ ಮಾಡಿದವರು ಇದ್ದಾರೆ ಅವರಿಗೆ ಗೌರವ ಸಲ್ಲಬೇಕು, ನಾನು ಅಷ್ಟು ದೊಡ್ಡವನಲ್ಲ. ನಾನು ಸಾಧನೆ ಮಾಡಬೇಕಾದದ್ದು ತುಂಬಾ ಇದೆ. ಮುಂದೆ ಅಂತ ದಿನ ಬಂದಾಗ ನನ್ನ ಮೂರ್ತಿ ಇಡಲಿ ನಾನೇ ಬರ್ತಿನಿ. ನನ್ನ ಮೂರ್ತಿ ನಿರ್ಮಾಣವಾದ ಮೇಲೆ ನನಗೆ ಗೊತ್ತಾಗಿದ್ದು, ಮೊದಲೇ ಬೇಡ ಅಂತಿದ್ದೆ ಎಂದರು. ಇದನ್ನೂ ಓದಿ: ಹಂಪಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಿಂತನೆ: ವಚನಾನಂದ ಮಹಾಸ್ವಾಮೀಜಿ 

ನಾನು ಹೋರಾಟದಲ್ಲಿ ನೇರವಾಗಿ ಭಾಗವಹಿಸಬೇಕು ಅಂತೇನಿಲ್ಲ. ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿಗಾಗಿ ವಾಲ್ಮೀಕಿ ಸಮಾಜ ಶ್ರೀಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ಸಿನಿಮಾದಿಂದ ನಾನು ಇಷ್ಟೊಂದು ಸಂಪಾದನೆ ಮಾಡಿರುವುದು. ಅದರ ಬಗ್ಗೆ ಕಾಳಜಿ, ಜವಾಬ್ದಾರಿ ನನಗಿದೆ. ಇವತ್ತು ಏನೇ ಸಾಮಾಜಿಕ ಕೆಲಸಗಳನ್ನು ಮಾಡುತ್ತಿದ್ದರು ಸಿನಿಮಾದಿಂದ ಬಂದ ದುಡ್ಡಲ್ಲಿ ಮಾಡುತ್ತಿದ್ದೇವೆ ಎಂದರು.

ಅಪ್ಪುನನ್ನು ನೆನೆದ ಕಿಚ್ಚ
ಅಪ್ಪು ಬಗ್ಗೆ ನಾವು ಏನೆ ಮಾತನಾಡಿದರೂ ಅದು ಒಳ್ಳೆಯ ರೀತಿಯಲ್ಲೇ ಇರಬೇಕು. ಅವರ ಬಗ್ಗೆ ನಾವು ಏನ್ ಮಾತನಾಡಕೂಡದು ಸಾಕಷ್ಟು ಒಳ್ಳೆಯ ಕೆಲಸಗಳನ್ನ ಮಾಡಿದ್ದಾರೆ. ಅದೇ ಜನರ ಮನಸ್ಸಿನಲ್ಲಿದೆ. ನಮ್ಮ ತಂದೆ, ತಾಯಿ ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವು ನಡೆಯುತ್ತಿದ್ದೇವೆ. ಮನಸ್ಸಿಗೆ ಬಂದಿದ್ದನ್ನ ಮನಸ್ಪೂರ್ವಕವಾಗಿ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಸಿನಿ ಶುಕ್ರವಾರ ‘ವೆಡ್ಡಿಂಗ್ ಗಿಫ್ಟ್’ ಚಿತ್ರದಿಂದ ಪ್ರೇಕ್ಷಕರಿಗೆ ಡ್ಯುಯೆಟ್ ಸಾಂಗ್ ಗಿಫ್ಟ್ 

ನಂತರ ಸುದೀಪ್ ‘ಸೊಂಟದ ವಿಷಯ ಬೇಡವೋ ಶಿಷ್ಯ’ ಹಾಡು ಹೇಳಿ ಅಭಿಮಾನಿಗಳನ್ನ ರಂಜಿಸಿದರು.

Share This Article
Leave a Comment

Leave a Reply

Your email address will not be published. Required fields are marked *