ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ (Bigg Boss Kannada) 11 ಸೀಸನ್‌ಗಳನ್ನ ಯಶಸ್ವಿಯಾಗಿ ಪೂರೈಸಿದೆ. ಇದೀಗ ಸೀಸನ್ 12ಕ್ಕೆ ಕೆಲವೇ ತಿಂಗಳು ಬಾಕಿ ಇರೋವಾಗಲೇ ಬಿಗ್‌ಬಾಸ್ ತಂಡದ ಕಡೆಯಿಂದ ಹಾಗೂ ಕಿಚ್ಚ ಸುದೀಪ್ ಅವರಿಂದ ಬಿಗ್ ಅಪ್‌ಡೇಟ್ ಸಿಕ್ಕಿದೆ.
ಹೌದು, ಕಿಚ್ಚ ಸುದೀಪ್ (Kichcha Sudeep) ಅವರೇ 12ನೇ ಸೀಸನ್‌ಗೂ ನಿರೂಪಣೆ ಮಾಡುವುದಾಗಿ ಸ್ಪಷ್ಟನೆ ಸಿಕ್ಕಿದೆ. ಬಿಗ್‌ಬಾಸ್ ಸಂಯೋಜಕರು ಹಾಗೂ ಕಲರ್ಸ್ ತಂಡ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಈ ನಿರ್ಧಾರವನ್ನು ಪ್ರಕಟಿಸಿದೆ.
11ನೇ ಸೀಸನ್ ಸಂದರ್ಭದಲ್ಲಿ ನಿರೂಪಕ ಕಿಚ್ಚ ಸುದೀಪ್ ವಿದಾಯ ಹೇಳಿದ್ದರು. ಇದಾದ ಬಳಿಕ ಸಾಕಷ್ಟು ಚರ್ಚೆಗಳು ಶುರುವಾಗಿದ್ವು, ಈ ಬಗ್ಗೆ ಕಿಚ್ಚ ಸುದೀಪ್ ಕೂಡಾ ಕಾದು ನೋಡಿ ಅನ್ನೋ ಅಭಿಪ್ರಾಯ ಹಂಚಿಕೊಂಡಿದ್ರು. ಇದೀಗ ಮತ್ತೆ 12ನೇ ಸೀಸನ್ ನಡೆಸಿಕೊಡುವ ಬಗ್ಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ ಕಿಚ್ಚ.
ಕಿಚ್ಚ ಸುದೀಪ್ ಇಲ್ಲದೇ ಬಿಗ್‌ಬಾಸ್ ನಿರೂಪಣೆಯನ್ನ ಊಹೆ ಮಾಡಿಕೊಳ್ಳುವುದಕ್ಕೂ ಆಗುವುದಿಲ್ಲ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಹೀಗಾಗಿ ಕಿಚ್ಚ ಸುದೀಪ್ ಈ ಬಾರಿಯ ಬಿಗ್‌ಬಾಸ್ ಕಾರ್ಯಕ್ರಮವನ್ನ ಮುಂದುವರಿಸಿದ್ದಾರೆ.