Delhi| ಕೋಟ್ಯಂತರ ಮೌಲ್ಯದ ಕೊಕೇನ್‌ ಪ್ರಕರಣದ ಹಿಂದೆ ಮಾಜಿ ಕಾಂಗ್ರೆಸ್‌ ನಾಯಕ

Public TV
1 Min Read

ನವದೆಹಲಿ: ದಕ್ಷಿಣ ದೆಹಲಿಯಲ್ಲಿ ಬುಧವಾರ ನಡೆಸಿದ ದಾಳಿಯಲ್ಲಿ 5,600 ಕೋಟಿ ರೂ. ಮೌಲ್ಯದ 562 ಕೆಜಿ ಕೊಕೇನ್ (Cocaine) ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾದ ಪ್ರಕರಣದ ಹಿಂದೆ ಕಾಂಗ್ರೆಸ್‌ನ (Congress) ಮಾಜಿ ಕಾರ್ಯಕರ್ತ ಇದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿ ತುಷಾರ್ ಗೋಯಲ್ (40) ಎಂಬಾತನನ್ನು ಬಂಧಿಸಲಾಗಿದ್ದು, ಈ ಹಿಂದೆ 2022 ರವರೆಗೆ ದೆಹಲಿ ಪ್ರದೇಶ ಕಾಂಗ್ರೆಸ್‌ನ ಆರ್‌ಟಿಐ ಸೆಲ್‌ನ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾಗಿ ಆತ ವಿಚಾರಣೆಯ ಸಮಯದಲ್ಲಿ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ರಾಯಚೂರಿನಲ್ಲಿ ಮಹಿಳಾ ಅರ್ಚಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸೋಷಿಯಲ್ ಮೀಡಿಯಾದಲ್ಲಿ ಡಿಕ್ಕಿ ಗೋಯಲ್ ಎಂಬ ಹೆಸರನ್ನು ಬಳಸಿ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಹರಿಯಾಣ ಘಟಕದ ಮುಖ್ಯಸ್ಥ ಉದಯ್ ಭಾನ್ ಸೇರಿದಂತೆ ಹಲವಾರು ಪ್ರಮುಖ ಕಾಂಗ್ರೆಸ್ ನಾಯಕರೊಂದಿಗಿನ ಫೋಟೋಗಳನ್ನು ಪೋಸ್ಟ್ ಮಾಡಿದ್ದಾನೆ. ಪಕ್ಷಕ್ಕೆ ರಾಜೀನಾಮೆ ನೀಡುವ ಮೊದಲು ಹರಿಯಾಣ ಬಿಜೆಪಿ ನಾಯಕ ಅನಿಲ್ ಜೈನ್ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಯಲ್ ಸೇರಿದಂತೆ ಹಿಮಾನ್ಶು ಕುಮಾರ್, ಔರಂಗಜೇಬ್ ಸಿದ್ದಿಕಿ, ಭರತ್ ಕುಮಾರ್ ಜೈನ್ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಕೊಕೇನ್ ಅನ್ನು ವಿವಿಧ ರಾಜ್ಯಗಳಿಂದ ರಸ್ತೆ ಮೂಲಕ ದೆಹಲಿಗೆ ಕಳ್ಳಸಾಗಣೆ ಮಾಡಲಾಗಿದ್ದು, ಗಾಂಜಾ ಥಾಯ್ಲೆಂಡ್‌ನ ಫುಕೆಟ್‌ನಿಂದ ತರಲಾಗಿದೆ. ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಕ್ರಿಪ್ಟೋಕರೆನ್ಸಿಯನ್ನು ಬಳಸಿದ್ದಾರೆ.

ಕೊಕೇನ್ ಸಾಗಣೆಯ ಹಿಂದೆ ದುಬೈ ಮೂಲದ ಪ್ರಮುಖ ಉದ್ಯಮಿ ಭಾಗಿಯಾಗಿರುವ ಬಗ್ಗೆ ಮೂಲಗಳು ಸುಳಿವು ನೀಡಿವೆ. ರಾಜಧಾನಿಯ ಉನ್ನತ ಮಟ್ಟದ ಪಕ್ಷಗಳಿಗೆ ಇದನ್ನು ಸರಬರಾಜು ಮಾಡಲಾಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶಿರೂರು ಭೂ ಕುಸಿತ ದುರಂತ – ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ

Share This Article