ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ- ಬೊಮ್ಮಾಯಿ

Public TV
2 Min Read

ಬೆಂಗಳೂರು: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಇದೇ ವರ್ಷ ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ (Kittur Rani Chennamma) ಹಾಗೂ ಸಂಗೊಳ್ಳಿ ರಾಯಣ್ಣ (Sangolli Rayanna) ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ (Tourism Department) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ (kannada and culture department) ವತಿಯಿಂದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದನ್ನೂ ಓದಿ:  ಸಮಾವೇಶಕ್ಕೂ ಮುನ್ನವೇ ದೇವರ ಮೊರೆ ಹೋದ ಕಾಂಗ್ರೆಸ್‌ ನಾಯಕರು- ಬಳ್ಳಾರಿಯಲ್ಲಿ ಹೋಮ

ಕಿತ್ತೂರು ಉತ್ಸವ ಪ್ರಾರಂಭವಾಗಿ 25-30 ವರ್ಷ ಕಳೆದಿದೆ. ಮಧ್ಯೆ-ಮಧ್ಯೆ ಕುಂಟುತ್ತಾ ಇದ್ದ ಉತ್ಸವಕ್ಕೆ ನಮ್ಮ ಸರ್ಕಾರ ಅಧಿಕೃತ ಆದೇಶದ ಮೂಲಕ ರಾಜ್ಯ ಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಹಿಂದೆ ತಾವು ಬೆಳಗಾವಿ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಹೆಚ್ಚಿನ ಅನುದಾನ ನೀಡಿ 3 ದಿನಗಳ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ್ದನ್ನು ಸ್ಮರಿಸಿದ ಅವರು, ಅಂದು ಜ್ಯೋತಿ ಕಿತ್ತೂರಿನಿಂದ ಬೆಂಗಳೂರಿಗೆ (Bengaluru) ಚೆನ್ನಮ್ಮಳ ಸಂದೇಶ ಹೊತ್ತು ಬರುತ್ತಿತ್ತು. ಈಗ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಕಿತ್ತೂರು ಸಂಸ್ಥಾನದ ರಾಜಧಾನಿ ಕಿತ್ತೂರಿಗೆ ಜ್ಯೋತಿ ಯಾತ್ರೆ ಬೆಳೆಸಿದೆ ಎಂದು ತಿಳಿಸಿದರು.

ಸ್ವಾತಂತ್ರ‍್ಯ ಹೋರಾಟದ ಮೊದಲ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂಬುದಾಗಿ ನಮ್ಮ ಕರ್ನಾಟಕ ವಿಶ್ವವಿದ್ಯಾಲಯ ಗೆಜೆಟಿಯರ್‌ನಲ್ಲಿ ಪ್ರಕಟಗೊಂಡಿದೆ. ಇದನ್ನು ರಾಷ್ಟ್ರೀಯ ದಾಖಲೆಗಳ ಪಟ್ಟಿಗೂ ನೋಂದಣಿ ಮಾಡಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಶುರುವಾಯ್ತು ಮತ್ತೊಂದು ಧರ್ಮ ದಂಗಲ್ – ಮದರಸಾ ಬ್ಯಾನ್‍ಗೆ ಹಿಂದೂ ಸಂಘಟನೆಗಳಿಂದ ಒತ್ತಾಯ

ಕಿತ್ತೂರಿನಲ್ಲಿ ಶಿಥಿಲಗೊಂಡಿರುವ ಪ್ರಸ್ತುತ ಅರಮನೆಯನ್ನು ಗಟ್ಟಿಗೊಳಿಸಿ, ಪಕ್ಕದಲ್ಲೇ ಹೊಸ ಅರಮನೆಯನ್ನೂ ಕಟ್ಟಿಸಲು ತೀರ್ಮಾನ ಮಾಡಲಾಗಿದೆ. ಇದರ ಜೊತೆಗೆ ಕಿತ್ತೂರನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೈಲಹೊಂಗಲ, ಸಂಗೊಳ್ಳಿ ಸೇರಿದಂತೆ ಕಿತ್ತೂರು ಸಂಸ್ಥಾನದ ಪ್ರಾಚೀನ ಕುರುಹುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

ಈಗಾಗಲೇ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ ಪ್ರಾರಂಭ ಮಾಡಿದ್ದೇವೆ. ಮುಂದಿನ ತಿಂಗಳು ಸೈನಿಕ ಶಾಲೆ ಉದ್ಘಾಟನೆ ಮಾಡುತ್ತೇವೆ. ಇದರೊಂದಿಗೆ ರಾಯಣ್ಣನನ್ನು ನೇಣುಗಂಬಕ್ಕೆ ಹಾಕಿದ ನಂದಗಡ ಸಮಾಧಿ ಸ್ಥಳವನ್ನೂ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಹೇಳಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *