ರಾಜಣ್ಣ ಬಿಜೆಪಿಗೆ ಹೋಗಲು ಅರ್ಜಿ ಹಾಕಿದ್ದಾರೆ – ಬಾಲಕೃಷ್ಣ ಸ್ಫೋಟಕ ಹೇಳಿಕೆ

Public TV
2 Min Read
KN Rajanna and HC Balakrishna

– ಅವರ ಬ್ರೈನ್ ಮ್ಯಾಪಿಂಗ್ ಮಾಡಿದ್ರೆ ಸತ್ಯ ಗೊತ್ತಾಗುತ್ತೆ ಎಂದ ಶಾಸಕ

ರಾಮನಗರ: ಕೆ.ಎನ್.ರಾಜಣ್ಣ (KN Rajanna) ಬಿಜೆಪಿಗೆ (BJP) ಹೋಗಲು ಅರ್ಜಿ ಹಾಕಿದ್ದಾರೆ. ಅವರ ಬ್ರೈನ್ ಮ್ಯಾಪಿಂಗ್ ಮಾಡಿದ್ರೆ ಸತ್ಯ ಗೊತ್ತಾಗುತ್ತದೆ. ಅವರು ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಮನಗರದಲ್ಲಿ (Ramanagar) ಮಾಧ್ಯಮದವರೊಂದಿಗೆ ಮಾತನಾಡಿ ಕೆ.ಎನ್.ರಾಜಣ್ಣರನ್ನ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲು ಒತ್ತಡ ಹೇರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ನನಗಿರುವ ಮಾಹಿತಿ ಪ್ರಕಾರ ಕೆ.ಎನ್.ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ. ಹೈಕಮಾಂಡ್ ವಿರುದ್ಧ ಮಾತನಾಡಿದ್ದಕ್ಕೆ ಅವರು ವಜಾ ಆಗಿದ್ದಾರೆ. ಹೀಗಾಗಿ ಬೇರೆ ಪಕ್ಷಕ್ಕೆ ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಿದ್ದಾರೆ. ಈಗೇನೋ ದೆಹಲಿಯಲ್ಲಿ ಸಮಾವೇಶ ಮಾಡ್ತಾರಂತೆ ಮಾಡಲಿ. ಕೆ.ಎನ್.ರಾಜಣ್ಣ ಬಿಜೆಪಿಗೆ ಹೋಗ್ತಿದ್ದಾರೋ? ಇಲ್ವೋ? ಅಂತ ಅವರನ್ನೇ ಕೇಳಿ. ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಿದ್ರೆ ಎಲ್ಲಾ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ – ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ

ರಾಜಣ್ಣ ಅವರನ್ನ ಸ್ವಾಗತ ಮಾಡ್ತಿರೋದು ಬಿಜೆಪಿ ನಾಯಕರೇ ಅಲ್ವಾ? ರಾಜಣ್ಣ ಈ ಹಿಂದೆ ನನಗೆ ಯಾವ ಪಕ್ಷದ ಅವಶ್ಯಕತೆಯೂ ಇಲ್ಲ ಅಂದಿದ್ದರು. ಈಗ ಯಾರ ಜೊತೆ ಸಂಪರ್ಕದಲ್ಲಿದ್ದಾರೆ ಅಂತ ಗೊತ್ತಾಗಬೇಕು. ನೂರಕ್ಕೆ ನೂರರಷ್ಟು ಅವರು ಬಿಜೆಪಿಗೆ ಸೇರುತ್ತಾರೆ. ನಮ್ಮ ಸರ್ಕಾರ ಇಲ್ಲ ಅಂದಿದ್ರೆ ಇಷ್ಟೊತ್ತಿಗೆ ಅವರು ಬಿಜೆಪಿ ಸೇರಿರುತ್ತಿದ್ದರು. ಈಗಾಗಲೇ ಒಂದು ಕಾಲು ಅವರು ಬಿಜೆಪಿಯಲ್ಲಿ ಇಟ್ಟಿದ್ದಾರೆ. ಜೊತೆಗೆ ಬಿಜೆಪಿ ಕೇಂದ್ರ, ರಾಜ್ಯ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.

ಕೆ.ಎನ್.ರಾಜಣ್ಣ ಮಂತ್ರಿಯಾಗಿದ್ದಾಗ ಯಾವ ರೀತಿ ನಡೆದುಕೊಂಡರು ಎಂದು ಎಲ್ಲರಿಗೂ ಗೊತ್ತಿದೆ. ಅವರ ನಡವಳಿಕೆ, ಮಾತು ಯಾವ ರೀತಿಯಿತ್ತು ಎನ್ನೋದು ಕೂಡ ಗೊತ್ತಿದೆ. ಮಾತು ಮನೆ ಕೆಡಿಸ್ತು, ತೂತು ಒಲೆ ಕೆಡಿಸ್ತು ಎನ್ನುವ ಹಾಗೇ ಅವರು ಮಾತಾಡುತ್ತಿದ್ದರು. ಅವರ ಮಾತಿನಿಂದಲೇ ಅವರು ಕೆಟ್ಟಿರೋದು, ಅದರ ಹಿಂದೆ ಯಾರ ಷಡ್ಯಂತ್ರವೂ ಇಲ್ಲ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಕಿಡ್ನ್ಯಾಪ್‌ ಜಾಲ ಪತ್ತೆ – ಐವರು ಅರೆಸ್ಟ್‌, 6 ಮಕ್ಕಳ ರಕ್ಷಣೆ

Share This Article