ಮತದಾನ ಬಹಿಷ್ಕಾರದ ಎಚ್ಚರಿಕೆ ಬೆನ್ನಲ್ಲೇ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ ಜಿಲ್ಲಾಡಳಿತ

Public TV
1 Min Read

ಮಡಿಕೇರಿ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದೆ ಇದ್ದರೆ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದ ದೊಡ್ಡಬಂಡಾರ ಗ್ರಾಮಕ್ಕೆ ಜಿಲ್ಲಾಡಳಿತ (District Administration) ಇದೀಗ ಕುಡಿಯುವ ನೀರಿನ ವ್ಯವಸ್ಥೆ ಮಾಡಿದೆ.

ಬೆಸ್ಸೂರು (Bessur) ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಬಂಡಾರ (Doddabandara) ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇತ್ತು. ಇದನ್ನು ಬಗೆಹರಿಸುವಂತೆ ಇತ್ತೀಚೆಗೆ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆಯೊಂದಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಕೆಟ್ಟು ಹೋಗಿದ್ದ ಬೋರ್‌ವೆಲ್‌ (Borwell) ಪಂಪ್‍ಸೆಟ್ ಸರಿಪಡಿಸಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಸ್ಪೇಸ್‌ಎಕ್ಸ್‌ನ ದೈತ್ಯ ರಾಕೆಟ್ ಪರೀಕ್ಷಾರ್ಥ ಹಾರಾಟದ ವೇಳೆ ಸ್ಫೋಟ

ಗ್ರಾಮಸ್ಥರ ಮತದಾನ ಬಹಿಷ್ಕಾರದ ಎಚ್ಚರಿಕೆಯಿಂದ ಹಲವಾರು ದಿನಗಳಿಂದ ಗ್ರಾಮದಲ್ಲಿ ತಲೆದೂರಿದ್ದ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ. ಇದೀಗ ಗ್ರಾಮದ ಜನರು ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಿದ ಜಿಲ್ಲಾಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯಾರು ತೆರೆಯುತ್ತಾರೆ ಬೆಂಗಳೂರಿನ ಹೆಬ್ಬಾಗಿಲು?

Share This Article