Virat Kohli Centuries: ಕ್ರಿಕೆಟ್‌ ದೇವರಿಗೆ ಸರಿಸಮನಾಗಿ ನಿಂತ ಕಿಂಗ್‌ ಕೊಹ್ಲಿ..!

Public TV
2 Min Read

ಕೋಲ್ಕತ್ತಾ: ಚೇಸ್‌ ಮಾಸ್ಟರ್‌, ಸೂಪರ್‌ ಸ್ಟಾರ್‌ ಕ್ರಿಕೆಟಿಗ, ಕ್ರಿಕೆಟ್‌ ಲೋಕದ ಕಿಂಗ್‌ ಎಂದೇ ಖ್ಯಾತಿ ಗಳಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಲೆಜೆಂಡ್‌ ಸಚಿನ್‌ ತೆಂಡೂಲ್ಕರ್‌ ದಾಖಲೆಯನ್ನ ಸರಿಗಟ್ಟಿದ್ದಾರೆ.

ತಮ್ಮ 35ನೇ ವರ್ಷದ ಹುಟ್ಟುಹಬ್ಬದ ದಿನದಂದೇ ಶತಕ ಸಿಡಿಸುವ ಮೂಲಕ ಫ್ಯಾನ್ಸ್‌ಗೆ ಬಂಪರ್‌ ಗಿಫ್ಟ್‌ ಕೊಟ್ಟಿದ್ದಾರೆ. ಸಚಿನ್‌ ತೆಂಡೂಲ್ಕರ್‌ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿದ ಸಾಧನೆ ಮಾಡಿದರೆ, ವಿರಾಟ್‌ ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲೇ ಈ ಸಾಧನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. 2018ರ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಎಂಟ್ರಿ ಕೊಟ್ಟ ಕೊಹ್ಲಿ ಇದೀಗ ಕ್ರಿಕೆಟ್‌ ಲೋಕದಲ್ಲಿ ಇತಿಹಾಸ ಪುಟ ಸೇರಿದ್ದಾರೆ. ಇದನ್ನೂ ಓದಿ: ಶತಕ ಮಿಸ್‌ ಆದ್ರೂ ಸಚಿನ್‌ ದಾಖಲೆ ಮುರಿದ ಕಿಂಗ್‌ ಕೊಹ್ಲಿ 

ಇದೀಗ ಏಕದಿನ ಕ್ರಿಕೆಟ್‌ನಲ್ಲಿ 277 ಇನ್ನಿಂಗ್ಸ್‌ನಲ್ಲಿ 49 ಶತಕ ಸಿಡಿಸಿದ ಕೊಹ್ಲಿಯೇ ನಂ.1 ಶತಕ ವೀರನಾಗಿದ್ದು, 452 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ಸಚಿನ್‌ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. 251 ಇನ್ನಿಂಗ್ಸ್‌ಗಳಲ್ಲಿ 31 ಶತಕ ಬಾರಿಸಿರುವ ರೋಹಿತ್‌ ಶರ್ಮಾ, 365 ಇನ್ನಿಂಗ್ಸ್‌ಗಳಲ್ಲಿ 30 ಶತಕ ಬಾರಿಸಿರುವ ಆಸ್ಟ್ರೇಲಿಯಾದ ರಿಕಿ ಪಾಟಿಂಗ್‌, 433 ಇನ್ನಿಂಗ್ಸ್‌ಗಳಲ್ಲಿ 28 ಶತಕ ಬಾರಿಸಿರುವ ಶ್ರೀಲಂಕಾದ ಸನತ್‌ ಜಯಸೂರ್ಯ ಕ್ರಮವಾಗಿ 3, 4 ಮತ್ತು 5ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಪಾಕ್‌ಗೆ ವರವಾದ ವರುಣ – ಕಿವೀಸ್‌ ವಿರುದ್ಧ 21 ರನ್‌ಗಳ ಜಯ; ಸೆಮೀಸ್‌ ಆಸೆ ಜೀವಂತ

ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಸಿಡಿಸುವ ಮೂಲಕ ವಿರಾಟ್‌ ಕೊಹ್ಲಿ ವೃತ್ತಿ ಜೀವನದಲ್ಲಿ 79 ಶತಕಗಳನ್ನ ಪೂರೈಸಿದ್ದಾರೆ. ಈ ಪೈಕಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 29, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 49 ಶತಕ ಸಿಡಿಸಿದ್ದಾರೆ. ಸಚಿನ್‌ ದಾಖಲೆ ಮುರಿಯಲು ಇನ್ನು ಒಂದೇ ಒಂದು ಶತಕವಷ್ಟೇ ಬಾಕಿಯಿದೆ ಎಂಬುದು ವಿಷೇಷ. ಇದನ್ನೂ ಓದಿ: ಪಾಕ್‌-ಕಿವೀಸ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ – ಅಭಿಮಾನಿಗಳಿಗೆ ನಿರಾಸೆ

Share This Article