ಕೋಲಾರ ನಗರಕ್ಕೆ ಭಾರಿ ವಾಹನಗಳಿಗೆ ನಿರ್ಬಂಧ ವಿಧಿಸಿ ಆದೇಶ

1 Min Read

ಕೋಲಾರ: ನಗರಕ್ಕೆ ಭಾರಿ ವಾಹನಗಳಿಗೆ (Heavy Vehicles) ನಿರ್ಬಂಧ ವಿಧಿಸಿ ಕೋಲಾರ (Kolar) ಜಿಲ್ಲಾಧಿಕಾರಿ ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ. ಕೋಲಾರ ನಗರದಲ್ಲಿನ ವಾಹನ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಇಂದಿನಿಂದ ಮೂರು ದಿನ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ

ಅಗತ್ಯ ಸೇವಾ ಸರಕು ವಾಹನಗಳನ್ನು ಹೊರತುಪಡಿಸಿ ಬಾರಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಹಣ್ಣು, ಹೂವು, ತಕರಾರಿ, ಗ್ಯಾಸ್ ಸಿಲಿಂಡರ್​, ನೀರಿನ ಟ್ಯಾಂಕರ್ ಹೊರತುಪಡಿಸಿ ಬೇರೆ ವಾಹನಕ್ಕೆ ನಿರ್ಬಂಧ ಹಾಕಲಾಗಿದೆ.

ಕಾರ್ಮಿಕರನ್ನು ಕರೆದೊಯ್ಯುವ ವಾಹನಗಳು ರಸ್ತೆ ಬದಿ ನಿಲ್ಲಿಸದಂತೆ ಡಿಸಿ ತಿಳಿಸಿದ್ದಾರೆ. ನಗರದ ಮಾಲಿನ್ಯ ಹಾಗೂ ವಾಹನ ದಟ್ಟಣೆ ಹೆಚ್ಚಾದ ಪರಿಣಾಮ ಈ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಮೆಟ್ರೋ ಪ್ರಯಾಣ ದರ 5% ಏರಿಕೆ – ಫೆ.9 ರಿಂದ ಜಾರಿ

Share This Article