ಕೋಲಾರ | ನಿಲ್ದಾಣದಲ್ಲಿ ನಿಂತಿದ್ದ ಬಸ್‌ಗಳಿಗೆ ಕಲ್ಲು ಎಸೆದ ದುಷ್ಕರ್ಮಿಗಳು

By
1 Min Read

ಕೋಲಾರ: ದುಷ್ಕರ್ಮಿಗಳು ನಿಂತಿದ್ದ ಬಸ್‌ಗಳಿಗೆ (Bus) ಕಲ್ಲು ಎಸೆದಿರುವ ಘಟನೆ ಕೋಲಾರ (Kolar) ಬಸ್ ನಿಲ್ದಾಣದ ಬಳಿ ನಡೆದಿದೆ.

ಸಾರಿಗೆ ನೌಕರರ ಮುಷ್ಕರದ (Transport Employees Strike) ಹಿನ್ನೆಲೆ ಕೋಲಾರ ಬಸ್ ನಿಲ್ದಾಣವು ಮುಂಜಾನೆಯಿಂದ ಸ್ಥಬ್ದವಾಗಿತ್ತು. ಬಳಿಕ ಒಂದೆರಡು ಬಸ್‌ಗಳನ್ನು ನಿಲ್ದಾಣಕ್ಕೆ ಅಧಿಕಾರಿಗಳು ಕಳುಹಿಸಿದ್ದರು. ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಕಿಡಿಗೇಡಿಗಳು ಬಸ್‌ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್‌ನ ಕಿಟಕಿ ಗಾಜು ಪುಡಿಯಾಗಿವೆ. ಇದನ್ನೂ ಓದಿ: ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ಇಲ್ಲದಿದ್ರೆ ಕರ್ನಾಟಕ ಬಂದ್‌ಗೆ ಕರೆ ನೀಡ್ತೆವೆ – ವಾಟಾಳ್

ಇನ್ನೊಂದೆಡೆ ಕೋಲಾರದಿಂದ ಹರಟಿ ಮಾರ್ಗವಾಗಿ ಸಂಚರಿಸಿದ್ದ ಬಸ್ ಕಿಡಿಗೇಡಿಗಳು ಕಲ್ಲು ಎಸೆದು ಪರಾರಿಯಾಗಿದ್ದಾರೆ. ಇನ್ನು ನಿಲ್ದಾಣದಲ್ಲಿ ನಿಂತಿದ್ದ ಬಸ್‌ಗಳಿಗೂ ಕಲ್ಲು ಎಸೆದಿದ್ದಾರೆ. ಕೆಲವು ಘಟನಾ ಸ್ಥಳಕ್ಕೆ ಕೋಲಾರ ನಗರ ಪೊಲೀಸರು ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್, ಕೋಲಾರದ ಎಸ್ಪಿ ನಿಖಿಲ್.ಬಿ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಇದೀಗ ಬಸ್ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್‌ ಪೋಸ್ಟ್

ಗದಗದಲ್ಲೂ ಚಲಿಸುತ್ತಿದ್ದ ಬಸ್‌ಗೆ ಕಲ್ಲು ತೂರಾಟ:
ಇನ್ನು ಹುಬ್ಬಳ್ಳಿಯಿಂದ ಗದಗ (Gadag) ಮಾರ್ಗವಾಗಿ ಹೊಸಪೇಟೆ ಸಂಚರಿಸುವ ಬಸ್‌ಗೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ಪರಿಣಾಮ ಮುಂದಿನ ಗಾಜು ಪುಡಿ ಪುಡಿಯಾಗಿದೆ. ಜಾರ್ಕಿನ್, ಮಾಸ್ಕ್ ಧರಿಸಿ ಬೈಕ್‌ನಲ್ಲಿ ಬಂದ ಮುಸುಕುಧಾರಿಗಳು ಚಲಿಸುವ ಬಸ್ಸಿಗೆ ಕಲ್ಲು ಹೊಡೆದು ಎಸ್ಕೇಪ್ ಆಗಿದ್ದಾರೆ. ಸದ್ಯ ಗದಗ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ನಿಂತಿದೆ.

ಇದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯನಗರ ಜಿಲ್ಲೆ ಹೊಸಪೇಟೆ ಡಿಪೋಗೆ ಸೇರಿದ ಬಸ್ ಆಗಿದ್ದು, ಸೋಮವಾರ ಹುಬ್ಬಳ್ಳಿಗೆ ಹೋಗಿತ್ತು. ಇಂದು ಮರಳಿ ಹೊಸಪೇಟೆ ಹೋಗುವ ವೇಳೆ ಈ ಘಟನೆ ನಡೆದಿದೆ.

Share This Article