ಕೋಲ್ಕತ್ತಾ ಅತ್ಯಾಚಾರ ಕೇಸ್ – ವಿಡಿಯೋ ಮಾಡಿ, ಬ್ಲ್ಯಾಕ್‌ಮೇಲ್‌ ಮಾಡಲು ಪ್ಲ್ಯಾನ್‌ ಮಾಡಿದ್ದ ಆರೋಪಿಗಳು

Public TV
1 Min Read
  • ಆರೋಪಿಗಳ ಮೊಬೈಲ್‌ನಲ್ಲಿ ಹಲವಾರು ಅಶ್ಲೀಲ ವಿಡಿಯೋ ಪತ್ತೆ 

ಕೋಲ್ಕತ್ತಾ: ಕಸ್ಬಾದಲ್ಲಿ ಕಾನೂನು ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ನಡೆಸಿದ್ದ ಆರೋಪಿ ಮೊನೊಜಿತ್ ಮಿಶ್ರಾ ಸಂತ್ರಸ್ತೆಯನ್ನು ಟಾರ್ಗೆಟ್‌ ಮಾಡಿ ಅತ್ಯಾಚಾರ ಎಸಗಿದ್ದ. ಅಲ್ಲದೇ ಕೃತ್ಯದ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಲು ಯೋಜನೆ ರೂಪಿಸಿಕೊಂಡಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಜೈಬ್ ಅಹ್ಮದ್ ಮತ್ತು ಪ್ರಮಿತ್ ಮುಖೋಪಾಧ್ಯಾಯ ಈ ವಿಚಾರವನ್ನು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಇದರಿಂದಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡದಂತೆ ತಡೆಯಲು ಮತ್ತು ವಿಚಾರ ಬಹಿರಂಗ ಪಡಿಸದಂತೆ ತಡೆಯಲು ಈ ರೀತಿ ಯೋಜಿಸಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕೋಲ್ಕತ್ತಾ ಗ್ಯಾಂಗ್‌ ರೇಪ್‌ | ಕಾಲಿಗೆ ಬಿದ್ದರೂ ನನ್ನನ್ನು ಬಿಡಲಿಲ್ಲ – ಸಂತ್ರಸ್ತೆ ದೂರಿನಲ್ಲಿ ಉಲ್ಲೇಖ

ಯುವತಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಆರೋಪಿಗಳ ಎಲ್ಲಾ ಯೋಜನೆಗಳು ವಿಫಲವಾಗಿವೆ. ಇನ್ನೂ ಕೃತ್ಯದ ವಿಡಿಯೋ ಕ್ಲಿಪ್‌ನ್ನು ಯಾರೊಂದಿಗಾದರೂ ಹಂಚಿಕೊಂಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಮೂವರು ಆರೋಪಿಗಳ ಮೊಬೈಲ್ ಫೋನ್‌ಗಳಲ್ಲಿ, ವಿಶೇಷವಾಗಿ ಮಿಶ್ರಾ ಮೊಬೈಲ್ ಫೋನ್‌ನಲ್ಲಿ ಹಲವಾರು ಅಶ್ಲೀಲ ವೀಡಿಯೊಗಳು ಇರುವುದು ಬೆಳಕಿಗೆ ಬಂದಿದೆ.

ಬುಧವಾರ ಸಂಜೆ ಕಾಲೇಜು ಆವರಣದಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಯುವತಿ ಆರೋಪಿಸಿ ದೂರು ನೀಡಿದ್ದರು. ದೂರಿನನ್ವಯ ಕಸ್ಬಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ಆರೋಪಿಗಳಾದ ಮೊನೊಜಿತ್ ಮಿಶ್ರಾ (31) (ಕಾಲೇಜಿನ ಮಾಜಿ ಘಟಕದ ಅಧ್ಯಕ್ಷ, ಹಾಲಿ ಟಿಎಂಸಿ ನಾಯಕ), ವರ್ಷದ ಜೈಬ್ ಅಹ್ಮದ್ (19) ಮತ್ತು ಪ್ರಮಿತ್ ಮುಖೋಪಾಧ್ಯಾಯನನ್ನು (20) ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಕೋಲ್ಕತ್ತಾದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌; ಟಿಎಂಸಿ ನಾಯಕ ಸೇರಿ ಮೂವರ ಬಂಧನ

Share This Article