ಮತಗಳ್ಳತನ ಆರೋಪ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು – ಅಂತರ ಕಾಯ್ದುಕೊಂಡ ರಾಗಾ

Public TV
1 Min Read

ಬೆಂಗಳೂರು: ಮಹಾದೇವಪುರ ಕ್ಷೇತ್ರದ ಫಲಿತಾಂಶವನ್ನು ಸಮೀಕ್ಷೆ ಮಾಡಿದಾಗ ಮತಗಳ್ಳತನ ಆಗಿರುವುದು ತಿಳಿದುಬಂದಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು ನೀಡಿದೆ.

ಕರ್ನಾಟಕದಲ್ಲಿ ಮತಗಳ್ಳತನ ಆಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಮಹಾದೇವಪುರದಲ್ಲಿ ಯಾವುದೇ ಅಕ್ರಮ ಆಗಿಲ್ಲ: ರಾಹುಲ್‌ ಗಾಂಧಿ ಆರೋಪಕ್ಕೆ ದಾಖಲೆ ಸಮೇತ ಲಿಂಬಾವಳಿ ತಿರುಗೇಟು

ಸಮಾವೇಶದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಯಿತು. 2024ರ ಲೋಕಸಭಾ ಚುನಾವಣೆಯಲ್ಲಿ ಮಹಾದೇವಪುರದಲ್ಲಿ ಮತಗಳ್ಳತನ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕೆಪಿಸಿಸಿಯಿಂದ ಮಾತ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಆದರೆ, ಎಐಸಿಸಿಯಿಂದ ದೂರು ನೀಡಿಲ್ಲ. ದೂರು ಪತ್ರದಲ್ಲಿ ವೇಣುಗೋಪಾಲ್, ರಣದೀಪ್‌ ಸುರ್ಜೇವಾಲಾ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸಹಿ‌ ಇದೆ. ಆದರೆ, ಆರೋಪ ಮಾಡಿದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಅಂತರ ಕಾಯ್ದುಕೊಂಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿ, ಉತ್ತರ ಕೊಡೋಕೆ ಇನ್ಯಾರನ್ನೋ ಕಳಿಸಿದ್ದಾರೆ: ಜೋಶಿ ಕಿಡಿ

ದೂರನ್ನು ಸ್ವೀಕರಿಸಿರುವ ಚುನಾವಣಾ ಆಯೋಗವು ಡಿಕೆಶಿಗೆ ಪತ್ರ ಬರೆದಿದೆ. ನಿಮ್ಮ ದೂರಿಗೆ ದಾಖಲೆ ಕೊಡಿ, ಡಿಕ್ಲರೇಷನ್‌ಗೆ ಸಹಿ ಹಾಕಿ ಎಂದು ಪತ್ರದಲ್ಲಿ ಆಯೋಗ ತಿಳಿಸಿದೆ.

Share This Article